ಕೋಲಾರ :
ಕಳಪೆ ಗುಣಮಟ್ಟದ ಆಹಾರ ಸೇವಿಸಿ 10ಕ್ಕೂ ಹೆಚ್ಚು ವಿಧ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮಾಲೂರು ತಾಲ್ಲೂಕಿನ ರಾಜೇನಹಳ್ಳಿ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ವಸತಿ ಶಾಲೆಯಲ್ಲಿ ಊಟ ತಿಂದ ವಿಧ್ಯಾರ್ಥಿಗಳು, ಬೆಳಿಗ್ಗೆ ಯಿಂದ ವಾಂತಿ ಮಾಡಿಕೊಳ್ಳುತ್ತಿದ್ದು, ಸುಸ್ತುನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.
ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳನ್ನು ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ವಸತಿ ಶಾಲೆಯ ಆಡಳಿತ ಮಂಡಳಿ ಮಕ್ಕಳಿಗೆ ಕಳಪೆ ಅಹಾರ ವಿತರಣೆ ಹಿನ್ನೆಲೆ ಪುಡ್ ಪಾಯಿಸನ್ ಆಗಿದೆ ಎಂದು ಪೋಷಕರ ಆರೋಪ ಮಾಡುತ್ತಿದ್ದು, ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ