ಕೊಪ್ಪಳ:
ಅಂತರಜಾತಿ ವಿವಾಹಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ.
ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ವ್ಯಾಪ್ತಿಯ ಮಾದಾಪೂರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಆತ್ಮಹತ್ಯೆ ಗೆ ಶರಣಾದವರನ್ನು ಹುಲಿಗೆಮ್ಮ(18) ಹಾಗೂ ವಿರುಪಾಕ್ಷಗೌಡ (20) ಎಂದು ಗುರುತಿಸಲಾಗಿದೆ.
ಪ್ರೇಮಿಗಳಿಬ್ಬರು ಕಳೆದ ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಮನೆಯಲ್ಲಿ ಮದುವೆ ವಿಚಾರವಾಗಿ ಗೊತ್ತಾಗಿದೆ. ಮದುವೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜೆ. ರಾಂಪೂರ ಗ್ರಾಮದ ಜಮೀನಿನಲ್ಲಿ ಇಬ್ಬರು ನೇಣಿಗೆ ಶರಣಾಗಿದ್ದಾರೆ.
ಸ್ಥಳಕ್ಕೆ ತಾವರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ