ಕೊರಟಗೆರೆ :
ತಣ್ಣೇನಹಳ್ಳಿ ರಾಜ್ಯ ಹೆದ್ದಾರಿಯಲ್ಲಿ ಸರಕಾರಿ ಬಸ್ ಮತ್ತು ಕಾರಿನ ನಡುವೆ ಅಪಘಾತವಾಗಿದ್ದು, ಸರಕಾರಿ ಬಸ್ ಚಾಲಕನ ಜಾಗರೂಕತೆಯಿಂದಗಿ ಬಸ್ಸಿನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಭಾನುವಾರ ನಡೆದಿದೆ.
ಕೊರಟಗೆರೆ ತಾಲ್ಲೂಕು ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಪಂ ವ್ಯಾಪಿಯ ತಣ್ಣೇನಹಳ್ಳಿ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಬೆಂಗಳೂರು ನಗರದಿಂದ ಕೊರಟಗೆರೆಗೆ ಅತಿವೇಗವಾಗಿ ಬರುತ್ತಿದ್ದ ಕಾರು ಕೆಎಸ್ಆರ್ಟಿಸಿ ಬಸ್ಗೆ ಏಕಾಏಕಿ ಡಿಕ್ಕಿ ಹೊಡೆದಿದೆ. ಬಸ್ಸಿನ ಚಾಲಕ ಅಪಘಾತ ನಿಯಂತ್ರಿಸಲು ಹೋಗಿ ಎಡಭಾಗದ ಕಾಲುವೆಗೆ ಬಸ್ ಇಳಿಸಿರುವ ಘಟನೆ ನಡೆದಿದೆ.
ಪಾವಗಡದಿಂದ ಕೊರಟಗೆರೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರು ಕ್ಷಣಾರ್ಧದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಚಾಲಕನನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಸರಕಾರಿ ಬಸ್ಸಿನ ನಿರ್ವಾಹಕಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ