ಕೊರಟಗೆರೆ :
ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಘಟನೆ ತಾಲೂಕಿನ ಕತ್ತಿನಾಗೇನಹಳ್ಳಿ ಬಳಿ ನಡೆದಿದೆ.
ಕಾರಿನಲ್ಲಿದ್ದ ಮಂಜು (20), ಹರ್ಷ(20) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳು. ಇವರು ಕೊರಟಗೆರೆ ನಿವಾಸಿಗಳು ಎಂದು ತಿಳಿದುಬಂದಿದೆ.
ನಿನ್ನೆ ರಾತ್ರಿ ಸುಮಾರು 11 ಸಮಯದಲ್ಲಿ ಈ ಅವಘಡ ನಡೆದಿದೆ ಎನ್ನಲಾಗಿದ್ದು, ಈ ಘಟನೆಯಲ್ಲಿ ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳುಗಳನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಐವರು ಸ್ನೇಹಿತರು ಸೇರಿ ಗೆಳೆಯನ ಬರ್ತ್ ಡೇ ಪಾರ್ಟಿ ಮುಗಿಸಿ ವಾಪಸ್ ಬರುವ ವೇಳೆ ಮುಂದೆ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮುಂಭಾಗದಲ್ಲಿ ಕುಳಿತಿದ್ದ ಮಂಜು ಮತ್ತು ಹರ್ಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದು, ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ