ಕರ್ನಾಟಕದಲ್ಲಿ ಕೊರೊನಾ ವೈರಸ್ ಗೆ 5 ನೇ ಬಲಿ!!

ಬೆಂಗಳೂರು :

     ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ಹೆಚ್ಚಾಗಿದ್ದು, ಇಂದು ರಾಜ್ಯದಲ್ಲಿ ಕೊರೊನಾ ವೈರಸ್ ಗೆ 5 ನೇ ಬಲಿ ಪಡೆದಿದೆ.

     ರಾಜ್ಯ ಆರೋಗ್ಯ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು, ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್‌ ಮೂಲಕ  ಸ್ಪಷ್ಟನೆ ನೀಡಿದ್ದಾರೆ.

     ಕಲಬುರಗಿಯಲ್ಲಿ 75 ವರ್ಷದ ವೃದ್ಧ ಇಂದು ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ. ವೃದ್ಧನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ.

     ಇಂದು ರಾಜ್ಯದಲ್ಲಿ 6 ಜನರಿಗೆ ಕೊರೊನಾ ವೈರಸ್ ಸೋಂಕು ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 181 ಕ್ಕೆ ಏರಿಕೆ ಕಂಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link