ಬೆಂಗಳೂರು :
ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ತಂಡದ ಇಬ್ಬರು ಪ್ರಮುಖ ಆಟಗಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ತಂಡದ ನಾಯಕ ಸಿ.ಎಂ.ಗೌತಮ್ ಹಾಗೂ ಅಬ್ರಾರ್ ಕಾಜಿ ಬಂಧಿತರು. 2019ರ ಕೆಪಿಎಲ್ ಪಂದ್ಯಾವಳಿಯಲ್ಲಿ ಬಳ್ಳಾರಿ ಹಾಗೂ ಹುಬ್ಬಳ್ಳಿ ತಂಡದ ನಡುವೆ ನಡೆದ ಅಂತಿಮ ಪಂದ್ಯದಲ್ಲಿ 20 ಲಕ್ಷ ರೂಗೆ ಮ್ಯಾಚ್ ಫಿಕ್ಸಿಂಗ್ ನಡೆದಿದ್ದು, ನಿಧಾನವಾಗಿ ಬ್ಯಾಟಿಂಗ್ ಮಾಡಲು ಇಬ್ಬರೂ ಹಣ ಪಡೆದಿದ್ದರು ಎಂಬುದು ತನಿಖೆಯಿಂದ ಬಯಲಿಗೆ ಬಂದಿದೆ.
ಬಂಧಿತ ಆಟಗಾರ ಸಿ.ಎಂ.ಗೌತಮ್ ರಣಜಿ, ಐಪಿಎಲ್ನ ಆರ್ಸಿಬಿ, ಮುಂಬೈ ಇಂಡಿಯನ್ಸ್ ಹಾಗೂ ದೆಹಲಿ ಡೇರ್ ಡೆವಿಲ್ಸ್ ತಂಡದ ಪರವಾಗಿ ಆಡಿದ್ದರು. ಅಬ್ರಾರ್ ಕಾಜಿ ಕರ್ನಾಟಕದ ಪರವಾಗಿ ರಣಜಿ ಪಂದ್ಯದಲ್ಲಿ ಆಡಿದ್ದರು. ಅವರು ಈಗ ಮಿಜೋರಾಂ ತಂಡದ ಪರವಾಗಿ ಆಡುತ್ತಿದ್ದಾರೆ.
ಸದ್ಯ ಸಿಸಿಬಿ ಪೊಲೀಸರು ಇಬ್ಬರೂ ಆಟಗಾರರನ್ನು ಬಂಧಿಸಿ, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.