ಕೆ.ಆರ್.ಪೇಟೆ :
ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ 11 ಕ್ಷೇತ್ರಗಳಲ್ಲಿ ಮೇಲುಗೈ ಸಾಧಿಸಿದ್ದು, ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದ ಬಿಜೆಪಿ ನಾರಾಯಣಗೌಡ ಗೆಲುವು ಸಾಧಿಸಿದ್ದಾರೆ.
ಈ ಗೆಲುವಿನ ಮೂಲಕ ಬಿಜೆಪಿ ಇತಿಹಾಸ ನಿರ್ಮಿಸಿದ್ದು, ಮಂಡ್ಯ ಕ್ಷೇತ್ರದಲ್ಲಿ ಮೊದಲ ಬಾರಿಗೆ ಖಾತೆ ತೆರೆದಂತಾಗಿದೆ.
ಈ ಕ್ಷೇತ್ರದ ಗೆಲುವನ್ನು ಪ್ರತಿಷ್ಟೆಯ ಪ್ರಶ್ನೆಯನ್ನಾಗಿಸಿಕೊಂಡಿದ್ದ ಯಡಿಯೂರಪ್ಪನವರು ತಮ್ಮ ಪುತ್ರ ವಿಜಯೇಂದ್ರರನ್ನೇ ಚುನಾವಣಾ ಉಸ್ತುವಾರಿ ನೋಡಿಕೊಳ್ಳಲು ನೇಮಿಸಿದ್ದರು. ಆರಂಭದಿಂದಲೂ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದ ವಿಜಯೇಂದ್ರ ಕೊನೆಗೂ ಮೊದಲ ಬಾರಿಗೆ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಕಾರಣಕರ್ತರಾಗಿದ್ದಾರೆ.
ಕೆ.ಆರ್. ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಭರ್ಜರಿ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಎನ್ನುವಂತಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
