ಮತ್ತೆ ಮುಂದೂಡಿಕೆಯಾಯ್ತು `ಕೆ-ಸೆಟ್’ ಪರೀಕ್ಷೆ!!

ಬೆಂಗಳೂರು : 

      ರಾಜ್ಯ ಸರ್ಕಾರ ವಾರಾಂತ್ಯದಲ್ಲಿ ಕರ್ಪ್ಯೂ ಘೋಷಿಸಿರುವ ಹಿನ್ನೆಲೆಯಲ್ಲಿ ಕೆ-ಸೆಟ್ ಪರೀಕ್ಷೆಯನ್ನು ಮತ್ತೆ ಮುಂದೂಡಲಾಗಿದೆ.

      ಮೈಸೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ(ಕೆ-ಸೆಟ್) ಪರೀಕ್ಷೆಯನ್ನು ಏಪ್ರಿಲ್ 25 ರ ಭಾನುವಾರ ನಡೆಸಲು ಪೂರ್ವಸಿದ್ಧತೆ ಮಾಡಿಕೊಂಡಿತ್ತು.0

     ಆದರೆ, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಾರಾಂತ್ಯದಲ್ಲಿ ಕರ್ಪ್ಯೂ ಘೋಷಿಸಿರುವ ಹಿನ್ನೆಲೆಯಲ್ಲಿ ಕೆಸೆಟ್ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಆದ್ದರಿಂದ ಕೆಸೆಟ್ ಪರೀಕ್ಷಾ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.

      ಎಲ್ಲಾ ನೋಂದಾಯಿತ ಅಭ್ಯರ್ಥಿಗಳು ಕೆಸೆಟ್ 2021 ಪರೀಕ್ಷೆಗೆ ಸಂಬಂಧಿಸಿದಂತೆ ಕೆಸೆಟ್ ವೆಬ್ ಸೈಟ್ ನಲ್ಲಿ http:/kset.uni.mysore.ac.in/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap