ಬೆಂಗಳೂರು :
ಟಿಕೆಟ್ ದರ ಏರಿಕೆಯ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರತಿದಿನ ಮತ್ತು ಮಾಸಿಕ ಪಾಸುಗಳ ದರವನ್ನು ಏರಿಕೆ ಮಾಡುವ ಮೂಲಕ ಪ್ರಯಾಣಿಕರಿಗೆ ಮತ್ತೊಂದು ಶಾಕ್ ನೀಡಿದೆ.
ಹೌದು, ಫೆ.25ರಂದು ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಿದ್ದ ಸಾರಿಗೆ ಸಂಸ್ಥೆ ವಿವಿಧ ರೀತಿಯ ದೈನಂದಿನ ಬಸ್ ಪಾಸ್ ಗಳ ದರವನ್ನು ಹೆಚ್ಚಿಸಿ ಆದೇಶ ಹೊರಡಿಸಿದ್ದು, ನೂತನ ದರ ಮಾರ್ಚ್ 1 ರಿಂದಲೇ ಜಾರಿಗೆ ಬಂದಿದೆ.
ಬೆಂಗಳೂರು, ಮೈಸೂರು, ಮಂಡ್ಯ, ದಾವಣಗೆರೆ ಸುತ್ತಮುತ್ತಲಿನ ಸ್ಥಳಗಳಲ್ಲಿ ವಿತರಣೆಯಾಗುವ ಬಸ್ ಪಾಸ್ ಗಳ ದರದಲ್ಲಿ ಹೆಚ್ಚಳವಾಗಿದೆ. ದೈನಂದಿನ ಬಸ್ ಪಾಸ್‌ಗಳು ಪ್ರತಿ ಬಸ್ ಪಾಸ್‌ಗೆ 10-15 ರೂ. ಏರಿಕೆಯಾಗಿದ್ದು, ಪರಿಷ್ಕೃತ ದರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೈಸೂರು ನಗರ ಮತ್ತು ಹೊರವಲಯದಲ್ಲಿ ದೈನಂದಿನ ಪಾಸುಗಳ ದರವನ್ನು ಏರಿಕೆ ಮಾಡಲಾಗಿದೆ. ಪಾಸ್ ದರ 10 ರೂ. ಹೆಚ್ಚಳವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ