ತರಿಕೆರೆ : KSRTC- ಖಾಸಗಿ ಬಸ್ ಮುಖಾಮುಖಿ : ಡ್ರೈವರ್ ಸಾವು!!!

ಚಿಕ್ಕಮಗಳೂರು:

      ಕೆಎಎಸ್‌ಆರ್‌ಟಿಸಿ ಬಸ್‌ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸರ್ಕಾರಿ ಬಸ್ಸಿನ ಚಾಲಕ ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ತರೀಕೆರೆ ತಾಲ್ಲೂಕಿನ ಪುಂಡನಹಳ್ಳಿ ಬಳಿಯ ಕುಡ್ಲೂರ್‌ ಗೇಟ್‌ನ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ.

      ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಕೆಎಎಸ್‌ಆರ್‌ಟಿಸಿ ಬಸ್‌ಗೆ ಶಿವಮೊಗ್ಗದಿಂದ ಬೆಂಗಳೂರು ಕಡೆ ಬರುತ್ತಿದ್ದ ಎಸ್‌ಆರ್‌ಎಸ್‌ ಬಸ್‌ ಡಿಕ್ಕಿ ಹೊಡೆದಿದೆ. ಪರಿಣಾಮ ಸರ್ಕಾರಿ ಬಸ್ಸಿನ ಚಾಲಕ ಮದ್ದೂರಿನ ಪುಟ್ಟಸ್ವಾಮಿಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಲ್ಲದೇ 28 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

       ಬೀರೂರು-ತರೀಕೆರೆ ಮಾರ್ಗ ಮಧ್ಯೆ ಈ ಅವಘಡ ಸಂಭವಿಸಿದ್ದು, ಗಾಯಾಳುಗಳನ್ನು ಬೀರೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ