ವಲಸೆ ಕಾರ್ಮಿಕರಿಗೆ ಮೇ.7ರವರೆಗೆ ಉಚಿತ ಬಸ್ ಸೌಲಭ್ಯ!!

ಬೆಂಗಳೂರು:

      ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು, ಅದನ್ನು ಮೇ.7 ರವರೆಗೆ ವಿಸ್ತರಿಸಲಾಗಿದೆ.

       ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಈ ಕುರಿತು ಮಾಹಿತಿ ನೀಡಿದ್ದು, ಮಂಗಳವಾರ(ಮೇ.5) ಉಚಿತ ಬಸ್ ಸೌಲಭ್ಯ ಕೊನೆಗೊಳ್ಳುತಿತ್ತು. ಆದರೆ ಕಾರ್ಮಿಕರ ಮತ್ತು ಜನರ ಅನುಕೂಲಕ್ಕಾಗಿ ಉಚಿತ ಸೌಲಭ್ಯವನ್ನು ಗುರುವಾರದವರೆಗೆ(ಮೇ.7) ವಿಸ್ತರಿಸಲಾಗಿದೆ. ಕಾರ್ಮಿಕರು ಮತ್ತು ಇತರೆ ಜನರು ಬಸ್ ನಿಲ್ದಾಣಗಳಲ್ಲಿ ಜಮಾವಣೆಯಾಗದೆ ನೆಮ್ಮದಿಯಿಂದ ತಮ್ಮ ಊರುಗಳಿಗೆ ತೆರಳಬೇಕೆಂದು ಮುಖ್ಯಮಂತ್ರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

      ಭಾನುವಾರ (ಮೇ.3) 951 ಕೆ.ಎಸ್.ಆರ್.ಟಿ.ಸಿ. ಬಸ್ ಗಳನ್ನು ಒದಗಿಸಲಾಗಿದ್ದು ಅಂದಾಜು 30 ಸಾವಿರ ಜನರು ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಸೋಮವಾರ ಈಗಾಗಲೇ 50 ಬಸ್ ಗಳಲ್ಲಿ ಸುಮಾರು 1,500 ಪ್ರಯಾಣಿಕರು ತಮ್ಮ ಊರಿಗೆ ತೆರಳಿದ್ದಾರೆ. ಬೆಂಗಳೂರಿನಲ್ಲಿ 550 ಬಸ್ ಗಳು ಮತ್ತು ರಾಜ್ಯದ ವಿವಿಧ ನಗರಗಳಲ್ಲಿ 400 ಬಸ್ ಗಳನ್ನು ಈ ಸೌಲಭ್ಯಕ್ಕೋಸ್ಕರ ಕಾಯ್ದಿರಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

      ಶನಿವಾರ 550 ಬಸ್ ಗಳಲ್ಲಿ ಅಂದಾಜು 16,500 ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಿದ್ದಾರೆ. ಭಾನುವಾರ (ಮೇ 3) ಎರಡು ರೈಲುಗಳು ಬಿಹಾರದ ಪಾಟ್ನಾ, ಒಂದು ಜಾರ್ಖಂಡ್ ನ ರಾಂಚಿಗೆ ತೆರಳಿವೆ. ಇದೇ ಸಮಯ ಒಡಿಶಾದ ಭುವನೇಶ್ವರಕ್ಕೆ ಒಂದು ರೈಲು ಸೇರಿದಂತೆ ಒಟ್ಟು ನಾಲ್ಕು ರೈಲುಗಳು 4,800 ಪ್ರಯಾಣಿಕರನ್ನು ಆ ರಾಜ್ಯಗಳಿಗೆ ಕರೆದೊಯ್ದಿದೆ.

      ಸೋಮವಾರ (ಮೇ 4) ಎರಡು ರೈಲುಗಳು ರಾಜಸ್ಥಾನದ ಜೈಪುರ ಮತ್ತು ಬಿಹಾರದ ಪಾಟ್ನಾಕ್ಕೆ ಹೊರಡಲಿವೆ. ಪ್ರಯಾಣಕ್ಕಿಂತ ಮೊದಲು ಎಲ್ಲ ಜನರಿಗೂ ಉಚಿತ ಊಟ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

     ಕಾರ್ಮಿಕರು ಮತ್ತು ಇತರ ಜನರು ಬಸ್ ನಿಲ್ದಾಣಗಳಲ್ಲಿ ಜಮಾವಣೆಯಾಗದೆ ನೆಮ್ಮದಿಯಿಂದ ತಮ್ಮ ಊರುಗಳಿಗೆ ತೆರಳಬೇಕೆಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap