ಪರೀಕ್ಷೆ ಬರೆಯೋ PUC ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ!!

ಬೆಂಗಳೂರು: 

      ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಸಿಹಿ ಸುದ್ಧಿಯೊಂದನ್ನು ನೀಡಿದೆ. 

      ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ.

      ವಿದ್ಯಾರ್ಥಿಗಳಿಗೆ ಅವರ ವಿದ್ಯಾ ಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಲ್ಲಿ ಪರೀಕ್ಷಾ ಕೇಂದ್ರವಿರುದರಿಂದ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ನಿಗಮದ ಬಸ್‌ಗಳನ್ನು ತೆರಳಲು ಅವಕಾಶ ಮಾಡಿಕೊಡಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಮನವಿ ಮಾಡಿತ್ತು. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ಕೆಎಸ್‍ಆರ್ ಟಿಸಿ ನಿಗಮದಿಂದ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. 

      ಅದರನ್ವಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್‌ಆರ್‌ಟಿಸಿ, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಅಂದರೆ ಮಾರ್ಚ್ 1ರಿಂದ ಮಾರ್ಚ್ 18ರವರೆಗೆ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು  ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹಾಗೂ ಪರೀಕ್ಷೆ ಮುಗಿದ ಬಳಿಕ ಮತ್ತೆ ಅಲ್ಲಿಂದ ವಾಸಸ್ಥಳಕ್ಕೆ ಹಿಂದಿರುಗಬಹುದು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap