ಮಂಗಳೂರು :
ನಾಗರಪಂಚಮಿ ದಿನವೇ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದ್ ಆಗಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ನಾಗರಪಂಚಮಿ ಹಬ್ಬಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಯಾವುದೇ ಅವಕಾಶ ಇಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಹೇಳಿದೆ.
ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಸ್ವಾಮಿ ದೇಗುಲಕ್ಕೆ ಭಕ್ತರ ಪ್ರವೇಶಕ್ಕೆ ನಾಳೆ ನಿರ್ಬಂಧ ಹೇರಲಾಗಿದೆ. ಪ್ರತೀ ವರ್ಷ ನಾಗರಪಂಚಮಿ ಹಿನ್ನೆಲೆ ಲಕ್ಷಾಂತರ ಭಕ್ತರಿಂದ ಪೂಜೆ ಸಲ್ಲಿಕೆಯಾಗುತ್ತಿತ್ತು, ಈ ಬಾರಿ ಅರ್ಚಕರಿಂದ ಮಾತ್ರ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ. ಭಕ್ತರ ಪರವಾಗಿ ಅರ್ಚಕರೇ ಸಂಪ್ರದಾಯದಂತೆ ಪೂಜೆ ನಡೆಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
