ಕಾಂಗ್ರೆಸ್ ಅತೃಪ್ತರ ಜೊತೆ ಸಿಎಂ: ಕುತೂಹಲ ಮೂಡಿಸಿದ ಭೇಟಿ!!!

ಬೆಂಗಳೂರು :

     ಚಿಂಚೋಳಿ ಶಾಸಕ ಉಮೇಶ್ ಜಾಧವ್ ಅವರು ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್‌ನ ಅತೃಪ್ತ ಶಾಸಕ ಮನವೊಲಿಸಲು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರೇ ಖುದ್ದಾಗಿ ಅಖಾಡಕ್ಕಿಳಿದಿದ್ದಾರೆ.

     ಹೌದು, ಇಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಉಪಹಾರದ ನೆಪದಲ್ಲಿ ಕೈ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಅತೃಪ್ತ ಶಾಸಕರಾದ ರಮೇಶ್, ನಾಗೇಂದ್ರ, ಮಹೇಶ್ ಕುಮಟಳ್ಳಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.  

      ಸರ್ಕಾರ ಉರುಳಿಸುವ ತಂಡದ ನೇತೃತ್ವ ವಹಿಸಿಕೊಂಡಿದ್ದ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ತಮ್ಮ ಬೆಂಬಲಿಗ ಶಾಸಕರೊಂದಿಗೆ ಮುಂಬೈನಲ್ಲಿ ಬೀಡು ಬಿಟ್ಟಿದ್ದರು. ಸದ್ಯ ಬಂಡಾಯವೆಲ್ಲ ತಣ್ಣಗಾಗಿದ್ದಾಗಲೇ ರಮೇಶ್​ ಬಣದ ಶಾಸಕ ಉಮೇಶ್​ ಜಾದವ್​ ಅವರು ರಾಜೀನಾಮೆ ನೀಡಿದ್ದಾರೆ.

      ಇನ್ನು ಶಾಸಕ ಉಮೇಶ್ ಜಾಧವ್ ಅವರು ರಾಜೀನಾಮೆ ಬೆನ್ನಲ್ಲೇ ಉಳಿದ ಮೂವರು ಅತೃಪ್ತ ಶಾಸಕರು ಏನಾದರೂ ರಾಜೀನಾಮೆ ನೀಡಿದರೆ ದೋಸ್ತಿ ಸರ್ಕಾರಕ್ಕೆ ತೊಂದರೆ ಆಗಬಹುದು ಎಂಬುದನ್ನು ಅರಿತಿರುವ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು, ಇಂದು ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಅಥಣಿಯ ಮಹೇಶ್ ಕಮಟಳ್ಳಿ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. 

      ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನಿತರೆ ಕಾಂಗ್ರೆಸ್ ನಾಯಕರು ಎಷ್ಟೇ ಮನವೊಲಿಸಲು ಪ್ರಯತ್ನಿಸಿದರೂ ರಮೇಶ್ ಜಾರಕಿಹೊಳಿ ಮತ್ತಿತರರು ಅವರ ಮಾತುಗಳನ್ನು ಒಪ್ಪಲು ಸಿದ್ಧರಿರಲಿಲ್ಲ. ಇಷ್ಟು ದಿನ ಇದು ಕಾಂಗ್ರೆಸ್‌ನ ಒಳ ಮುನಿಸು ನಾವ್ಯಾಕೆ ತಲೆ ಕೆಡಿಸಿಕೊಳ್ಳಬೇಕು ಎಂದು ಸುಮ್ಮನಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಇದೀಗ ಸರ್ಕಾರವನ್ನು ಉಳಿಸಿಕೊಳ್ಳಲು ಅತೃಪ್ತ ಶಾಸಕರ ಮನವೊಲಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link