ಬೆಂಗಳೂರು :
ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ನಡೆಯುವ ಉಪಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಘೋಷಣೆಯಾಗಿದೆ. ರಾಜ್ಯದ 15 ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸನ್ನದ್ಧವಾಗಿದ್ದು, ಹುಣಸೂರು ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಜೆಡಿಎಸ್ ಏಕಾಂಗಿ ಹೋರಾಟ ನಡೆಸಲಿದೆ. ಉಪ ಚುನಾವಣೆ ಫಲಿತಾಂಶದ ಮೇಲೆ ರಾಜ್ಯದ ಮುಂದಿನ ರಾಜಕೀಯ ದಿಕ್ಕು ನಿರ್ಧಾರವಾಗುತ್ತದೆ. ಎಲ್ಲಾ ಕ್ಷೇತ್ರಗಳಿಗೆ ಸ್ವತಂತ್ರವಾಗಿ ಜೆಡಿಎಸ್ ಅಭ್ಯರ್ಥಿ ಹಾಕುತ್ತೇವೆ ಎಂದು ತಿಳಿಸಿದ್ದಾರೆ.
ರಾಜ್ಯದ 15 ವಿಧಾನಸಭಾ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಅಕ್ಟೋಬರ್ 21 ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/04/hd-kumaraswamy_625x300_1528875439055.jpg)