ಬೆಂಗಳೂರು:
ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆಯನ್ನು ಕುಮಾರಸ್ವಾಮಿ ತಳ್ಳಿ ಹಾಕಿದ್ದು, ಯಾವುದೇ ಕಾರಣಕ್ಕೂ ಬಿಎಂಟಿಸಿ ಸೇರಿದಂತೆ ಯಾವುದೇ ನಿಗಮಗಳು ಬಸ್ ಪ್ರಯಾಣ ದರವನ್ನು ಏರಿಸುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.
ಪೆಟ್ರೋಲ್ ಡೀಸೆಲ್ ದರ ಏರಿಕೆಯಾದ ಹಿನ್ನೆಲೆಯಲ್ಲಿ ಎಲ್ಲಾ ನಾಲ್ಕು ಸಾರಿಗೆ ನಿಗಮಗಳು ನಷ್ಟ ಅನುಭವಿಸುತ್ತಿವೆ ಎಂದು ಶೇ.18ರಷ್ಟು ಪ್ರಯಾಣ ದರವನ್ನು ಏರಿಕೆ ಮಾಡಲು ಸಾರಿಗೆ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಅದೇ ಸಂದರ್ಭದಲ್ಲಿ ಇಂಧನ ದರ 2 ನಷ್ಟು ಕಡಿಮೆ ಮಾಡಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಬಸ್ ಪ್ರಯಾಣ ಏರಿಕೆ ಬೇಡ ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದರೂ ಆದರೂ ಸಾರಿಗೆ ಇಲಾಖೆಯು ಶೇ.16 ರಷ್ಟು ಏರಿಕೆ ಮಾಡುವಂತೆ ಮತ್ತೆ ಪ್ರಸ್ತಾವನೆ ಸಲ್ಲಿಸಿತ್ತು.
ಇಂದು ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಸಾರಿಗೆ ಸಚಿವ.ಡಿ.ಸಿ.ತಮ್ಮಣ್ಣ ಹಾಗೂ ಸಾರಿಗೆ ಸಂಸ್ಥೆ ವಿವಿಧ ವಿಭಾಗಗಳ ಪ್ರಮುಖರಿಗೆ ಪ್ರಯಾಣಿಕರಿಗೆ ಹೊರೆಯಾಗದಂತೆ ಇಲಾಖೆಯ ನಷ್ಟವನ್ನು ಸರಿದೂಗಿಸಲು ಯೋಜನೆ ರೂಪಿಸುವಂತೆ ಸಿಎಂ ಕುಮಾರಸ್ವಾಮಿ ಸ್ಪಷ್ಟ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಸಭೆಯಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ|| ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ|| ಇ.ವಿ.ರಮಣರೆಡ್ಡಿ, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಬಸವರಾಜು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ