ಬೆಂಗಳೂರು :
ಮಾಜಿ ಮುಖ್ಯಮಂತ್ರಿಗಳಿಗೆ ಏನು ಭದ್ರತೆ ಕೊಡಬೇಕೋ ಅದನ್ನು ಕೊಟ್ಟಿದ್ದೇವೆ. ಅವರಿಗೆ ಜೀವ ಬೆದರಿಕೆ ಇದ್ದರೆ ಅದಕ್ಕೆ ಸಂಬಂಧಿಸಿದಂತೆ ವಿವರ ನೀಡಿದರೆ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರ ರಕ್ಷಣೆ ನಮ್ಮ ಆದ್ಯತೆ. ಅವರಿಗೆ ಹೆಚ್ಚಿನ ಭದ್ರತೆ ಒದಗಿಸುತ್ತೇವೆ. ಆದರೆ, ವಿನಾಃಕಾರಣ ಆರೋಪ ಸರಿಯಲ್ಲ. ನಾನು ಸಚಿವನಾಗಿ ಏನು ಮಾಡಬೇಕು ಅದನ್ನು ಮಾಡುತ್ತೇನೆ ಎಂದರು.
ಬಿ.ಎಸ್.ಯಡಿಯೂರಪ್ಪ ಅವರಿಗೂ ಈ ಹಿಂದೆ ಮಾಜಿ ಮುಖ್ಯಮಂತ್ರಿಯಾಗಿದ್ದಾಗ ಎಷ್ಟು ಭದ್ರತೆಯನ್ನು ನೀಡಲಾಗಿತ್ತೋ ಅಷ್ಟೇ ಭದ್ರತೆಯನ್ನು ಕುಮಾರಸ್ವಾಮಿಯವರಿಗೂ ನೀಡಲಾಗಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ