ದಾವಣಗೆರೆ:
ಕುಂದೂರು ಗ್ರಾ ಪಂ ನಡೆದಿದ್ದ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಕ್ಕೆ ಭ್ರಷ್ಟಾಚಾರ ವಿರೋಧಿ ವೇದಿಕೆ ಮುಖಂಡನನ್ನು ಸಾಯುವ ಹಾಗೆ ಹೊಡೆದಿರುವ ಘಟನೆ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.
ಪ್ರಸನ್ನ ಕುಮಾರ್ ಎಂಬುವವರ ಮೇಲೆ ಗ್ರಾಮ ಪಂಚಾಯ್ತಿಯ ಕೆಲ ಸದಸ್ಯರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದ್ದು . ಗಾಯಗೊಂಡ ಪ್ರಸನ್ನ ಅವರನ್ನು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ಕೂಡ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಕುಂದೂರು ಗ್ರಾಮ ಪಂಚಾಯ್ತಿಯಲ್ಲಿ ನಡೆಯುತ್ತಿದ್ದ ಲಕ್ಷಾಂತರ ರೂಪಾಯಿ ಹಗರಣ ಬಯಲಿಗೆಳೆದಿದ್ದರು. ಅಲ್ಲದೆ ಭ್ರಷ್ಟಾಚಾರ ಬಯಲಿಗೆಳೆದು ಗ್ರಾಮ ಪಂಚಾಯತಿ ಉಪಾಧ್ಯಕ್ಷನ ಸ್ಥಾನವನ್ನು ವಜಾಗೊಳಿಸಿದ್ದರು. ಇದರಿಂದಾಗಿ ಪ್ರಸನ್ನ ಅವರ ಮೇಲೇ ಪಂಚಾಯ್ತಿಯ ಕೆಲ ಸದಸ್ಯರಿಗೆ ದ್ವೇಷ ಹುಟ್ಟಿಕೊಂಡಿತ್ತು. ಆದರಿಂದ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜಮ್ಮ ಹಾಗೂ ಅವರ ಪತಿ, ಮಾಜಿ ಅಧ್ಯಕ್ಷೆ ಗೌರಮ್ಮ ಹಾಗೂ ಅವರ ಮಗ ಮತ್ತು ಕೊಮ್ರಿ ಮಂಜುನಾಥ ಹಾಗೂ ಆಂಜನೇಯ ಎಂಬವರು ಪ್ರಸನ್ನ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
