ದಾಖಲೆಯಿಲ್ಲದ 1.5 ಲಕ್ಷ ನಗದು ವಶ!!!

      ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಮಾಳ ಚೆಕ್‍ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಜೀಪಿನಲ್ಲಿ ಸಾಗಿಸುತ್ತಿದ್ದ 1.50 ಲಕ್ಷ ರೂ.ಗಳನ್ನು ತಹಸೀಲ್ದಾರ್ ನಿನ್ನೆ ರಾತ್ರಿ ವಶಕ್ಕೆ ಪಡೆದಿದ್ದಾರೆ.

      ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸರು ಮಾಳ ಚೆಕ್ ಪೋಸ್ಟ್​ನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಜೀಪಿನಲ್ಲಿ ದಾಖಲೆ ಇಲ್ಲದ 1,50,000 ರೂಪಾಯಿ ನಗದು ಪತ್ತೆಯಾಗಿದೆ.

      ಈ ಹಣ ಕಾರಿನಲ್ಲಿದ್ದ ಬಾಲಕೃಷ್ಣ ಮತ್ತು ಸೈಯದ್ ಮುಹಿನುಲ್ಲಾ ಎಂಬುವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಈ ಹಣವನ್ನು ಪೊಲೀಸರು ಕಾರ್ಕಳ ತಹಶಿಲ್ದಾರ್ ಅವರಿಗೆ ಹಸ್ತಾಂತರಿಸಿದ್ದಾರೆ.

     ಯಾವ ಉದ್ದೇಶಕ್ಕೆ ಹಣ ಸಾಗಿಸಲಾಗುತ್ತಿತ್ತು ಎಂಬುದು ತಿಳಿದುಬಂದಿಲ್ಲ. ಹಣದ ದಾಖಲಾತಿಯನ್ನು ನೀಡಿಲ್ಲ.ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ನಡುವೆಯೇ ಕುರುಡು ಕಾಂಚಾಣದ ಕೈವಾಡ ಜೋರಾಗಿ ಕಂಡುಬರುತ್ತಿದೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ