ಬೆಳಗಾವಿ:
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮತಗಟ್ಟೆಯ ಒಳಗಡೆ ಮತಯಾಚನೆ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆ ಹಿಂಡಲಗಾದಲ್ಲಿ ಮತ ಚಲಾವಣೆ ಮಾಡಲು ಆಗಮಿಸಿದ್ದ ಶಾಸಕ ಲಕ್ಷ್ಮಿ ಹೆಬ್ಬಾಳ್ಕರ್, ಮತದಾನವಾದ ಬಳಿಕ ಇತರೆ ಬೂತ್ ಗಳಿಗೆ ತೆರಳಿ ಮತದಾರರಿಗೆ ಕೈಮುಗಿದು ಇದೊಂದು ಬಾರಿ ಮತ ಹಾಕಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಇದಕ್ಕೆ ಆಕ್ಷೇಪಿಸಬೇಕಿದ್ದ ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿದ್ದ ಅಧಿಕಾರಿಗಳು ಬದಲಿಗೆ ಶಾಸಕಿಗೆ ಗೌರವ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಮತಗಟ್ಟೆಯೊಳಗೆ ಕುಳಿತಿದ್ದ ಏಜೆಂಟರುಗಳು ಮೌನ ವಹಿಸಿದ್ದರೆನ್ನಲಾಗಿದೆ.
ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಈ ಮಧ್ಯೆ ಶಾಸಕಿಯೊಬ್ಬರು ಮತಗಟ್ಟೆಗಳಿಗೆ ತೆರಳಿ ಮತ ಯಾಚನೆ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿರುವ ಘಟನೆ ನಡೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
