ಬೆಂಗಳೂರು :
ಶತಮಾನಗಳಿಂದಲೂ ನಡೆದುಕೊಂಡು ಬರುತ್ತಿರುವ ಲಾಲ್ ಬಾಗ್ ಫಲಪುಷ್ಟ ಪ್ರದರ್ಶನ ಈ ಬಾರಿ ರದ್ದಾಗಲಿದೆ.
ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ತೋಟಗಾರಿಕಾ ಸಂಘದ ಸಹಯೋಗದಲ್ಲಿ ಪ್ರತಿ ವರ್ಷ ಲಾಲ್ ಬಾಗ್‌ನಲ್ಲಿ ಫ್ಲವರ್ ಶೋ ಆಯೋಜನೆ ಮಾಡಲಾಗುತ್ತಿತ್ತು. ಆಗಸ್ಟ್ 9ರಿಂದ ಈ ಬಾರಿಯ ಫ್ಲವರ್ ಶೋ ಆಯೋಜಿಸಲು ದಿನಾಂಕ ನಿಗದಿಯಾಗಿತ್ತು. ಲಾಲ್ ಬಾಗ್‌ನಲ್ಲಿ ನಡೆಯಬೇಕಿದ್ದ 212ನೇ ಫ್ಲವರ್ ಶೋ ರದ್ದುಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮೈಸೂರು ತೋಟಗಾರಿಕಾ ಸಂಘ ಹೇಳಿದೆ.
ವರ್ಷಕ್ಕೆ ಎರಡು ಬಾರಿ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ ನಡೆಯುತ್ತಿತ್ತು. ಫ್ಲವರ್ ಶೋಗೆ ಲಕ್ಷಾಂತರ ಮಂದಿ ಲಾಲ್ ಬಾಗ್ ಗೆ ಬರುತ್ತಾರೆ. ಇದರಿಂದ ಸೋಂಕು ಹೆಚ್ಚಾಗಬಹುದು ಎಂಬ ಕಾರಣಕ್ಕಾಗಿ ಈ ಬಾರಿಯ ಫ್ಲವರ್ ಶೋವನ್ನು ರದ್ದುಪಡಿಸಲಾಗುತ್ತಿದೆ.
ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಬೆಂಗಳೂರಿನಲ್ಲಿ ಕೊರೊನಾ ವೈರಸ್ ತನ್ನ ಬಾಹುಬಲವನ್ನು ಹೆಚ್ಚಿಸಿಕೊಳ್ಳುತ್ತಿದೆ. ನಿನ್ನೆ ಒಂದೇ ದಿನ 1 ಸಾವಿರಕ್ಕೂ ಅಧಿಕ ಪಾಸಿಟಿವ್ ಕೇಸ್ ಗಳು ಬೆಂಗಳೂರಿನಲ್ಲಿ ಧೃಡಪಟ್ಟಿವೆ. ಸೋಂಕು ಹೆಚ್ಚಾಗುವುದನ್ನು ತಡೆಯೋದಕ್ಕೆ ಭಾನುವಾರ ಲಾಕ್ ಡೌನ್ ತಂತ್ರ ರೂಪಿಸಲಾಗಿದೆ. ಇದೀಗ ಕೊರೊನಾ ಎಫೆಕ್ಟ್ ಫ್ಲವರ್ ಶೋಗೂ ತಟ್ಟಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ