ಹಾಸನ:
ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯ ಸಾರ್ವಜನಿಕ ದರ್ಶನಕ್ಕೆ ಇಂದು ಕಡೆಯ ದಿನವಾಗಿದ್ದು, ಮಂಗಳವಾರ ಮಧ್ಯಾಹ್ನ ಗರ್ಭಗುಡಿ ಬಾಗಿಲನ್ನು ಮುಚ್ಚಲಾಗುತ್ತದೆ.
ಇಂದು ಬೆಳಗ್ಗೆ 6 ಗಂಟೆವರೆಗೆ ಭಕ್ತರಿಗೆ ದರ್ಶನದ ಅವಕಾಶ ನೀಡಲಾಗಿದ್ದು, ಬಳಿಕ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ದೇವಸ್ಥಾನದ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಗುತ್ತಿದೆ.
ಅಕ್ಟೋಬರ್ 17ರಂದು ತೆರೆದಿದ್ದ ಹಾಸನಾಂಬ ದೇವಾಲಯ ಬಾಗಿಲು ಅಕ್ಟೋಬರ್ 29ರಂದು ಮುಚ್ಚುತ್ತಾರೆ. ಮೂರು ದಿನಗಳಿಂದ ದೇವಿ ದರ್ಶನಕ್ಕೆ ಭಕ್ತ ಸಾಗರ ಹರಿದುಬಂದಿದ್ದು, ಅಂದಾಜು ನಾಲ್ಕು ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ.
ಈ ಬಾರಿ 13 ದಿನಗಳ ಕಾಲ ಹಾಸನಾಂಬೆ ದರ್ಶನ ನೀಡಿದ್ದಾಳೆ. ಮೊದಲ ದಿನ ಭಕ್ತರಿಗೆ ದೇವಿಯ ದರ್ಶನ ಇರಲಿಲ್ಲ. ಹಾಗೆಯೇ ಕೊನೆಯ ದಿನ ಕೂಡ ಭಕ್ತರಿಗೆ ದೇವಿಯ ದರ್ಶನ ಇರುವುದಿಲ್ಲ. ಉಳಿದಂತೆ ಎಲ್ಲ ದಿನಗಳಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಜಿಲ್ಲಾಡಳಿತ ಭಕ್ತರಿಗೆ ಅಗತ್ಯವಿರುವ ಎಲ್ಲ ರೀತಿಯ ಮೂಲಭೂತ ಸೌಕರ್ಯ ಕಲ್ಪಿಸಿದ್ದು, ದೇವಿಯ ಸುಗಮ ದರ್ಶನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ