ಬೆಂಗಳೂರು :
ಅಥಣಿ ಕ್ಷೇತ್ರದ ಮಾಜಿ ಶಾಸಕರಾದ ಲಕ್ಷ್ಮಣ ಸವದಿ ಅವರನ್ನು ಸಚಿವರನ್ನಾಗಿ ಮಾಡುವ ಹೈಕಮಾಂಡ್ ಲೆಕ್ಕಾಚಾರ ಕುತೂಹಲಕ್ಕೆ ಕಾರಣವಾಗಿದೆ.
ಬಹು ದಿನಗಳಿಂದ ನನೆಗುದಿಗೆ ಬಿದ್ದಿದ್ದ ಸಚಿವ ಸಂಪುಟಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, 17 ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಇದರಲ್ಲಿ ಅಚ್ಚರಿಯ ಸೇರ್ಪಡೆ ಎನ್ನುವಂತೆ ಮಾಜಿ ಶಾಸಕ ಲಕ್ಷ್ಮಣ ಸವದಿ ಅವರಿಗೆ ಚಾನ್ಸ್ ಸಿಕ್ಕಿದೆ. ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಂಪುಟದಲ್ಲಿ ಅವಕಾಶ ಸಿಕ್ಕಿದೆ. ಅವರು ಶಾಸಕರಲ್ಲದಿದ್ದರೂ ಮಂತ್ರಿ ಭಾಗ್ಯ ನೀಡಲಾಗಿದೆ.
ಅಥಣಿ ಕ್ಷೇತ್ರದಲ್ಲಿ ಮಹೇಶ್ ಕಮಟಳ್ಳಿ ವಿರುದ್ಧ ಲಕ್ಷ್ಮಣ ಸವದಿ ಕಣಕ್ಕಿಳಿದು, ಸೋಲು ಕಂಡಿದ್ದರು. ಆದರೆ ಈಗಾಗಲೇ ಮಹೇಶ್ ಕುಮಟಳ್ಳಿ ಅನರ್ಹಗೊಂಡಿದ್ದಾರೆ. ಒಂದು ವೇಳೆ ಉಪ ಚುನಾವಣೆ ಎದುರಾದರೆ ಲಕ್ಷ್ಮಣ ಸವದಿ ಅವರನ್ನು ನಿಲ್ಲಿಸಿ ಗೆಲ್ಲಿಸಿಕೊಂಡು ಬರುವ ಚಿಂತನೆ ಬಿಜೆಪಿ ಪಕ್ಷದ್ದಾಗಿದೆ. ಆದ್ದರಿಂದ ಸಚಿವ ಸ್ಥಾನ ನೀಡಲಾಗಿದೆ ಎನ್ನಲಾಗಿದೆ.
ಶಾಸಕ ಅಲ್ಲದಿದ್ದರೂ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಲಕ್ಷ್ಮಣ ಸವದಿ 6 ತಿಂಗಳ ಒಳಗೆ ವಿಧಾನಸಭೆ ಅಥವಾ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಬೇಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
