ಚಾಮರಾಜನಗರ:
ಎಐಸಿಸಿ ಅದ್ಯಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಸ್ಪರ್ಧೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಹ್ವಾನ ಕೊಟ್ಟಿದ್ದಾರೆ.
ಚಾಮರಾಜನಗರದಲ್ಲಿ ನಡೆದ ಕಾಂಗ್ರೆಸ್ ಪರಿವರ್ತನಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಕೇವಲ ಉತ್ತರ ಭಾರತದಿಂದ ಮಾತ್ರ ಸ್ಪರ್ಧೆ ಮಾಡುವುದಲ್ಲ. ದಕ್ಷಿಣ ಭಾರತದಿಂದಲೂ ಸ್ಪರ್ಧೆ ಮಾಡಲಿ. ಅದರಲ್ಲೂ ಕರ್ನಾಟಕದಿಂದಲೇ ಸ್ಪರ್ಧೆ ಮಾಡಲಿ ಎಂದು ಹೇಳಿ ಆಹ್ವಾನ ನೀಡಿದ್ದಾರೆ.
ಈ ಹಿಂದೆ ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ನಾವು ಆಯ್ಕೆ ಮಾಡಿದ್ದೇವು. ಈಗ ರಾಹುಲ್ ಗಾಂಧಿಯನ್ನು ಆಯ್ಕೆ ಮಾಡಿ ಪ್ರಧಾನ ಮಂತ್ರಿಯನ್ನಾಗಿ ಮಾಡೋಣ ಎಂದು ಹೇಳಿದರು.
ಮೋದಿಯವರಿಂದ ಸಾಧನೆ ಏನೂ ಇಲ್ಲ ಬರೀ ಭಾವನೆ. ಮೋದಿ ಕೇವಲ ಭಾಷಣ ಮತ್ತು ಪ್ರಚಾರ ಮಾಡುತ್ತಿದ್ದಾರೆ. ಮೋದಿ ಐದು ವರ್ಷಗಳ ಸಾಧನೆ ಶೂನ್ಯವಾಗಿದೆ. ಎಂದು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
