‘ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ’ ಸ್ಥಾಪನೆ ಮಾಡಿ ಸಿಎಂ ಆದೇಶ!!

ಬೆಂಗಳೂರು :

      ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ.

      ನಿನ್ನೆಯಷ್ಟೇ ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸುದೀರ್ಘ ಪತ್ರ ಬರೆದು, ಲಿಂಗಾಯತ ಅಭಿವೃದ್ಧಿ ನಿಗಮದ ಜೊತೆಗೆ, ಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ಕಲ್ಪಿಸಿಕೊಂಡುವಂತೆ ಮನವಿ ಮಾಡಿದ್ದರು. ವೀರಶೈವ ಸಮುದಾಯದ ಮುಖಂಡರು, ಲಿಂಗಾಯುತ ಸಮುದಾಯದ ಮುಖಂಡರು, ಸ್ವಾಮೀಜಿಗಳು ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯ ನಂತ್ರ, ಲಿಂಗಾಯತ, ವೀರಶೈವ ಸಮುಂದಾಯದ ಅಭಿವೃದ್ಧಿಗೆ ನಿಗಮ ಸ್ಥಾಪನೆಗೆ ಸಿಎಂಗೆ ಮನವಿ ಮಾಡಲಾಗಿತ್ತು.

     ಇದಕ್ಕೆ ಪ್ರತಿ ಸ್ಪಂದಿಸಿರುವಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಆದೇಶಿಸಿದ್ದಾರೆ. ಈ ಮೂಲಕ ಕೊನೆಗೂ ಐತಿಹಾಸಿಕ ನಿಲುವನ್ನು ತಾಳಿ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ, ಆದೇಶಿಸಿದ್ದಾರೆ.

     ಮರಾಠ ಅಭಿವೃದ್ಧಿ ನಿಗಮವನ್ನು ಮಸ್ಕಿ, ಬಸವಕಲ್ಯಾಣ ಉಪ ಚುನಾವಣೆಯ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಸ್ಥಾಪನೆ ಮಾಡಿದ್ದರು. ಈ ಬಳಿಕ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡುವಂತೆ ಸಿಎಂ ಮೇಲೆ ಒತ್ತಡ ಹಾಕಲಾಗಿತ್ತು. ಇದೀಗ ಇದಕ್ಕೆ ಮಣಿದಿರುವಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಆದೇಶಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap