ಶಾಕಿಂಗ್ ನ್ಯೂಸ್ : ಮದ್ಯ ಖರೀದಿಸಲು ಇನ್ಮುಂದೆ ‘ಆಧಾರ್’ ಕಡ್ಡಾಯ!?

ಮಂಡ್ಯ :

      ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್ ವೊಂದು ಹರಿದಾಡುತ್ತಿದ್ದು, ಮದ್ಯ ಖರೀದಿಸಲು ಇನ್ಮುಂದೆ ಆಧಾರ್ ಕಾರ್ಡ್ ಕಡ್ಡಾಯ ಮಾಡಲು  ಸರ್ಕಾರದ ಮಟ್ಟದಲ್ಲಿ ಚಿಂತನೆ ಆರಂಭವಾಗಿದೆ.

      ನಿರ್ಜನ ಪ್ರದೇಶ, ಮೈದಾನ, ಉದ್ಯಾನ, ಸಾರ್ವಜನಿಕ ಸ್ಥಳಗಳಲ್ಲಿ ಬೇಕಾಬಿಟ್ಟಿಯಾಗಿ ಮದ್ಯದ ಬಾಟಲಿ ಹಾಗೂ ಟೆಟ್ರಾ ಪ್ಯಾಕ್‌ಗಳನ್ನು ಬಿಸಾಡಲಾಗುತ್ತಿದೆ. ಕೆರೆ, ನದಿ ದಡದಲ್ಲೂ ಬಾಟಲಿ ಹಾಗೂ ಟೆಟ್ರಾ ಪ್ಯಾಕ್‌ಗಳೇ ಹೆಚ್ಚಾಗಿ ಕಾಣಿಸುತ್ತಿವೆ. ಇವು ಪರಿಸರಕ್ಕೆ ಮಾರಕವಾಗಿದ್ದು, ನೀರು ಕುಡಿಯಲು ಬರುವ ಪ್ರಾಣಿಗಳ ಜೀವಕ್ಕೂ ಕುತ್ತು ತರುತ್ತಿವೆ.

      ಆ ಬಗ್ಗೆ ಸಮೀಕ್ಷೆ ನಡೆಸಿದ್ದ ಮಂಗಳೂರಿನ ‘ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ’, ಮದ್ಯದ ಟೆಟ್ರಾ ಪ್ಯಾಕ್ ಹಾಗೂ ಬಾಟಲಿಗಳಿಂದ ಆಗುತ್ತಿರುವ ಪರಿಸರ ಮಾಲಿನ್ಯ ತಡೆಯಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

      ಆ ಮನವಿ ಉಲ್ಲೇಖಿಸಿ ಅಬಕಾರಿ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವ ಕಾರ್ಯದರ್ಶಿಯು, ಒಕ್ಕೂಟದ ಸಲಹೆಗಳ ಬಗ್ಗೆ ಅಭಿಪ್ರಾಯ ತಿಳಿಸುವಂತೆ ಹೇಳಿದ್ದಾರೆ. ಅದರನ್ವಯ ಆಯುಕ್ತರು, ರಾಜ್ಯದ ಎಲ್ಲ ಉಪ ಆಯುಕ್ತರಿಗೆ ಸಂದೇಶ ಕಳುಹಿಸಿ ಹಿಂಬರಹ ನೀಡುವಂತೆ ಸೂಚಿಸಿದ್ದಾರೆ. 

      ಹೀಗಾಗಿ ಎಣ್ಣೆ ಪ್ರಿಯರು ಆಧಾರ್ ಮಾಹಿತಿ ಕೊಟ್ಟರಷ್ಟೇ ಮದ್ಯ ಸಿಗಲಿದೆ, 2 ನೇ ಬಾರಿ ಮಧ್ಯ ಖರೀದಿಗೆ ಹಳೆಯ ಬಾಟಲ್ ಕೊಡಬೇಕು ಎಂಬ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.

       ಎಣ್ಣೆ ಬಾಟಲ್ ನಿಂದ ಪರಿಸರ ಮಾಲಿನ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ನಿಯಮ ಜಾರಿಗೆ ತರಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆದೇಶದ ಪ್ರತಿ ವೈರಲ್ ಆಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap