ಬೆಂಗಳೂರು :
ರಾಜ್ಯ ಸರ್ಕಾರ ಹಸಿರು ವಲಯದಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಹೊಸ ಮಾರ್ಗ ಸೂಚಿಯ ಪ್ರಮುಖಾಂಶಗಳು :
- ಗ್ರೀನ್ ಝೋನ್ ವ್ಯಾಪ್ತಿಯ 13 ಜಿಲ್ಲೆಗಳಲ್ಲಿ ವ್ಯಾಪಾರ, ವಹಿವಾಟಿಗೆ ಅವಕಾಶ
- ವಿಶೇಷ ಆರ್ಥಿಕ ವಲಯ, ಕೈಗಾರಿಕಾ ವಲಯ, ಕೈಗಾರಿಕಾ ಟೌನ್ ಶಿಪ್, ರಫ್ತು ಆಧಾರಿತ ವಲಯಗಳಲ್ಲಿ ಕೆಲಸ ಮಾಡಲು ಕಾರ್ಮಿಕರಿಗೆ ಅವಕಾಶ ಮಾಡಿಕೊಡಬೇಕು
- ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲೇ ತಂಗಲು ಅವಕಾಶ ಕಲ್ಪಿಸಬೇಕು
- ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆಯನ್ನು ಒದಗಿಸಬೇಕು
- ಗ್ರೀನ್ ಜೋನ್ ವ್ಯಾಪ್ತಿಯ ಜಿಲ್ಲೆಗಳಲ್ಲಿರುವ ಮಾರುಕಟ್ಟೆಯಲ್ಲಿರುವ ಕಾಂಪ್ಲೆಕ್ಸ್, ವಸತಿ ಸಮುಚ್ಚಯಗಳಲ್ಲಿರುವ ಅಂಗಡಿಗಳನ್ನು ತೆರೆಯಲು ಅನುಮತಿ
- ಮಾರುಕಟ್ಟೆ, ವಸತಿ ಸಮುಚ್ಚಯಗಳಲ್ಲಿ ಶೇ. 50ರಷ್ಟು ಕಾರ್ಮಿಕರಿಗೆ ಕೆಲಸ ಮಾಡಲು ಅವಕಾಶ.ಪಾಲಿಕೆ ವ್ಯಾಪ್ತಿಯ ಅಂಗಡಿಗಳನ್ನು ತೆರೆಯಲು ಅನುಮತಿ.
- ಗ್ರೀನ್ ಜೋನ್ ನಲ್ಲಿರುವ ಮಾಲ್ ಗಳನ್ನು ತೆರೆಯುವಂತಿಲ್ಲ.
- ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯ.
- ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ.
ಆರ್ಥಿಕತೆಗೆ ಪುನಶ್ಚೇತನ ನೀಡಲು ಸರ್ಕಾರ ಕೆಲವು ಸಡಿಲಿಕೆ ನೀಡಿದ್ದು, ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಹೊಸ ಮಾರ್ಗಸೂಚಿ ರೆಡ್ ಝೋನ್ ನಲ್ಲಿರುವ ಜಿಲ್ಲೆಗಳಿಗೆ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಇನ್ನು ಮೇ.3 ರವರೆಗೆ ಈ ಹೊಸ ಗೈಡ್ ಲೈನ್ಸ್ ಅನ್ವಯವಾಗಲಿದ್ದು, ಆ ಬಳಿಕ ಮತ್ತೊಮ್ಮೆ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ