ಬೆಂಗಳೂರು :
ಮಧ್ಯಾಹ್ನ 12 ಗಂಟೆಯ ಬಳಿಕ ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಇಂದಿನಿಂದ ಒಂದು ವಾರಗಳ ಕಾಲ ಸಿಲಿಕಾನ್ ಸಿಟಿಯಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಯಲ್ಲಿದೆ. ಬೆಳ್ಳಂಬೆಳಗ್ಗೆ ಖಾಕಿ ಪಡೆ ನಗರದ ವಿವಿಧೆಡೆ ಪ್ರಮುಖ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡುವ ಮೂಲಕ ಸರ್ಪಗಾವಲು ಹಾಕಿದೆ. ಲಾಕ್ ಡೌನ್ ಮೊದಲ ದಿನವಾದ ಇಂದು ಬೆಂಗಳೂರಿಗರ ಪ್ರತಿಕ್ರಿಯೆ ಹೇಗಿದೆ ಎಂಬುದನ್ನು ವೀಕ್ಷಿಸಲು ಬೆಳ್ಳಂಬೆಳಗ್ಗೆ ಟ್ರಾಕ್ ಸೂಟ್ನಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ರಸ್ತೆಗಳಿದಿದ್ದಾರೆ.
ನಗರದ ಕಬ್ಬನ್ ಪಾರ್ಕ್ ಬಳಿ ವಾಕಿಂಗ್ ಮಾಡುತ್ತಾ ಆಯುಕ್ತರು ಪರಿಶೀಲನೆ ನಡೆಸಿದ ಅವರು, ವಾಯುವಿಹಾರದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಜನರ ಸಮಸ್ಯೆಯನ್ನು ಆಲಿಸಿದರು.
ಈ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಾತನಾಡಿ, ಜನ ಸುಖಾಸುಮ್ಮನೆ ರಸ್ತೆಗಳಿದರೆ, ಕಠಿಣ ಕ್ರಮ ಜರುಗಿಸಿ ಅದಕ್ಕೆ ಕಡಿವಾಣ ಹಾಕಬೇಕು ಎಂದು ಪೊಲೀಸರಿಗೆ ಸೂಚಿಸಲಾಗಿದೆ. ಈಗಾಗಲೇ ಪೊಲೀಸರು ಎಲ್ಲಾ ಬಗೆಯ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರು ಮಾತು ಕೇಳದ ಅನಿವಾರ್ಯತೆ ಎದುರಾದರೇ, ಪೊಲೀಸ್ ಬಲ ಹೆಚ್ಚಿಸಲಾಗುವುದು. ಮಧ್ಯಾಹ್ನ 12 ಗಂಟೆಯ ಬಳಿಕ ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಅಗತ್ಯ ಸೇವೆಗಳಿಗೆ ಮಾತ್ರವೇ ಅವಕಾಶ ಕಲ್ಪಿಸಲಾಗಿದೆ. ಪೊಲೀಸರು ಸಾರ್ವಜನಿಕರಿಗೆ ಸಹಕಾರ ನೀಡಿ, ಕಾರ್ಯ ನಿರ್ವಹಿಸುತ್ತಾರೆ. ಹೀಗಾಗಿ ಜನ ಕೂಡ ಪೊಲೀಸರಿಗೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
