ಹಾವೇರಿ :
ಲಾಕ್ ಡೌನ್ ಉಲ್ಲಂಘಿಸಿ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ನಮಾಜ್ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿ ನಡೆದಿದೆ.
ದೇಶದಾದ್ಯಂತ ಲಾಕ್ ಡೌನ್ 4.0 ನಿಯಮ ಜಾರಿಯಿದ್ದರೂ, ಸೋಮವಾರ ಬೆಳಿಗ್ಗೆ 4 ಗಂಟೆಯಿಂದಲೇ ರಂಜಾನ್ ಹಬ್ಬದ ಪ್ರಯುಕ್ತ ನಗರದ ಇಸ್ಲಾಂಪುರ ಓಣಿಯಲ್ಲಿ ನಮಾಜ್ ಮಾಡಲಾಗಿದೆ. ಪೊಲೀಸರಿಗೆ ವಿಷಯ ತಿಳಿದ ಬಳಿಕ ಸ್ಥಳಕ್ಕೆ ಆಗಮಿಸಿದ್ದಾರೆ. ಆ ನಂತರ ಪ್ರಾರ್ಥನಾ ಸ್ಥಳದಿಂದ ಜನರು ಕಾಲ್ಕಿತ್ತಿದ್ದಾರೆ.
ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ನೂರಾರು ಜನ ಒಟ್ಟಿಗೆ ಸೇರುವ ಅಗತ್ಯ ಇತ್ತೇ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
