ಮಂಗಳೂರು:
ಸುಮಲತಾ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಅಪೇಕ್ಷೆ ಪಡುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಮಂಡ್ಯ ಕ್ಷೇತ್ರ ಜೆಡಿಎಸ್ ನ ಕ್ಷೇತ್ರ ಎಂದು ಪರೋಕ್ಷವಾಗಿ ಸುಮಲತಾ ಅವರಿಗೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಟಾಂಗ್ ನೀಡಿದ್ದಾರೆ.
ಇಂದು ಮಂಗಳೂರಿನಲ್ಲಿ ಮಾತನಾಡಿದ ಅವರು, ಮಂಡ್ಯದಿಂದ ಸುಮಲತಾ ಟಿಕೆಟ್ ಕೇಳಿರುವುದು ಸ್ವಾಭಾವಿಕ. ಆದರೆ ಮಂಡ್ಯ ಮತ್ತು ಹಾಸನದಲ್ಲಿ ಜೆಡಿಎಸ್ ಪ್ರಾಬಲ್ಯ ಹೆಚ್ಚಿದೆ. ಅದನ್ನು ಕಾಂಗ್ರೆಸ್ ಮುಖಂಡರು ಅರ್ಥ ಮಾಡಿಕೊಳ್ಳುತ್ತಾರೆ ಎಂದು ಭಾವಿಸುತ್ತೇನೆ ಎಂದಿದ್ದಾರೆ.
“ನಾನು ಸ್ಪರ್ಧಿಸಿದರೆ ಮಂಡ್ಯದಿಂದ ಮಾತ್ರ” ಎಂದು ಅಂಬರೀಶ್ ಪತ್ನಿ ಸುಮಲತಾ ಪಟ್ಟು ಹಿಡಿದ್ದಾರೆ. ಹಾಗಾಗಿ, ರಾಜಕೀಯಕ್ಕೆ ಕಾಲಿಡಲು ಸಿದ್ಧರಾಗಿರುವ ನಿಖಿಲ್ ಕುಮಾರಸ್ವಾಮಿ ಕ್ಷೇತ್ರ ಬದಲಾಯಿಸಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ನೀಡಿರುವ ಹೇಳಿಕೆ ಅಚ್ಚರಿ ಮೂಡಿಸಿದೆ.
ಈ ಮೂಲಕ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯುವದನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಪರೋಕ್ಷವಾಗಿ ಖಚಿತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ