ದರ್ಶನ್ ಫಾರ್ಮ್ ಹೌಸ್ ಮೇಲೆ ಐಟಿ ರೈಡ್!!

0
37

ಮೈಸೂರು :

     ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ಕಂದಾಯ ಇಲಾಖೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. 

      ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಪರವಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದ, ಜೊಡೆತ್ತುಗಳಲ್ಲಿ ಒಬ್ಬರೆನಿಸಿಕೊಂಡಿದ್ದ ನಟ ದರ್ಶನ್ ರವರ ಮೈಸೂರಿನ ಟಿ ನರಸೀಪುರ ತಾಲ್ಲೂಕಿನಲ್ಲಿರುವ ನಟ ದರ್ಶನ್ ಫಾರ್ಮ ಹೌಸ್ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು, ದಾಖಲೆಯ ಶೋಧಕಾರ್ಯದಲ್ಲಿ ತೊಡಗಿದ್ದಾರೆ.

      ನಟ ದರ್ಶನ್ ಮಂಡ್ಯ ಪಕ್ಷೇತರ ಸುಮಲತಾ ಪರವಾಗಿ ಮಂಡ್ಯ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣೆಗೆ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಸಿದ ನಂತರ ಯಶ್ ಮತ್ತು ನಟ ದರ್ಶನ್ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.

      ಇಂತಹ ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ ತೆರಿಗೆ ವಂಚನೆ ಸೇರಿದಂತೆ ವಿವಿಧ ಬಗೆಯ ಆಕ್ರಮದ ಬಗ್ಗೆ ದಾಖಲೆಗಳ ಶೋಧಕಾರ್ಯದಲ್ಲಿ ತೊಡಗಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

LEAVE A REPLY

Please enter your comment!
Please enter your name here