ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ಸಾವು!

ಬೆಳಗಾವಿ :

     ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ  ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

      ಹುಕ್ಕೇರಿ ತಾಲೂಕಿನ ಪಾಶ್ಚಾಪುರ ಗ್ರಾಮದ ಸುರೇಶ್ ಭೀಮಪ್ಪ ಸನದಿ(28) ಮೃತ ದುರ್ದೈವಿ. ಸುರೇಶ್ ಅವರನ್ನು ಹುಕ್ಕೇರಿ ತಾಲೂಕಿನ ಕಣವಿಕಟ್ಟಿ ಗ್ರಾಮದ ಬೂತ್ ನಂ. 99 ರಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಈ ವೇಳೆ ಎದೆ ನೋವು ಕಾಣಿಕೊಂಡು ಕೆಳಗೆ ಬಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

      ಇವರು ಪಾಶ್ಚಾಪುರ ಕಂದಾಯ ಇಲಾಖೆಯ ಗ್ರಾಮ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಇದೇ ತಿಂಗಳು 26ರಂದು ಅವರ ಮದುವೆ ಕೂಡ ನಿಶ್ಚಯವಾಗಿತ್ತು ಎನ್ನಲಾಗಿದೆ.

      ಸುರೇಶ್ ಮೃತ ದೇಹವನ್ನು ಹುಕ್ಕೇರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link