ಈ ಬಾರಿಯ ಚುನಾವಣಾ ಫಲಿತಾಂಶ 3 ಗಂಟೆ ತಡ!!!

ಬೆಂಗಳೂರು :

      ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶ 3 ಗಂಟೆ ತಡವಾಗಿ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

      ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಮುಖ್ಯಚುನಾವಣಾಧಿಕಾರಿ ಸಂಜೀವ್ ಕುಮಾರ್, ಸುಪ್ರೀಂಕೋರ್ಟ್ ಒಂದು ವಿಧಾನಸಭಾ ವ್ಯಾಪ್ತಿಯ 5 ಮತಗಟ್ಟೆಯ ವಿವಿಪ್ಯಾಟ್ ಮತ್ತು ಇವಿಎಂಗಳಲ್ಲಿ ಬಿದ್ದ ಮತಗಳನ್ನು ತಾಳೆ ಮಾಡಬೇಕು ಎಂದು ಆದೇಶಿಸಿದೆ ಹೀಗಾಗಿ ಫಲಿತಾಂಶ ಪ್ರಕಟ ಮೂರು ಗಂಟೆ ತಡವಾಗಬಹುದು ಎಂದು ಹೇಳಿದರು.

ತಾಳೆ ಮಾಡುವ ವಿವಿಪ್ಯಾಟ್ ಸಂಖ್ಯೆ ಹೆಚ್ಚಿಸಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

      ಆಯೋಗವು ಒಂದು ವಿಧಾನಸಭಾ ಕ್ಷೇತ್ರ ಒಂದು ಮತಗಟ್ಟೆಯ ವಿವಿಪ್ಯಾಟ್ ಮತ್ತು ಇವಿಎಂಗಳನ್ನು ತಾಳೆ ಮಾಡಲಾಗುವುದು ಎಂದು ಹೇಳಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಇವಿಎಂ ಬಳಕೆಯ ಕುರಿತು ಸುಪ್ರೀಂಕೋರ್ಟ್ ಗೆ ದೇಶದ 21 ರಾಜಕೀಯ ಪಕ್ಷಗಳು ಅರ್ಜಿ ಸಲ್ಲಿಸಿದ್ದವು. ಈ ವೇಳೆ ಚುನಾವಣಾ ಕ್ಷೇತ್ರದ ಶೇ. 50 ರಷ್ಟು ಇವಿಎಂಗಳನ್ನು ವಿವಿಪ್ಯಾಟ್ ನೊಂದಿಗೆ ಹೋಲಿಕೆ ಮಾಡಿ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿತ್ತು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link
Powered by Social Snap