ನಿಂತದ್ದ ಲಾರಿಗೆ ಕಾರು ಡಿಕ್ಕಿ : ಸ್ಥಳದಲ್ಲೇ ಓರ್ವ ಸಾವು!!

ಹುಬ್ಬಳ್ಳಿ:

     ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ಕು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

     ಮೃತ ವ್ಯಕ್ತಿಯನ್ನು ತಮಿಳುನಾಡು ಮೂಲದ ಅಯ್ಯನಾರ್ ( 35 ) ಎಂದು ಗುರುತಿಸಲಾಗಿದೆ.

     ಅಪಘಾತ ನಡೆದ ಸ್ಥಳದಲ್ಲಿದ್ದ ಜನ  ಕಾರಿನ ಗ್ಲಾಸ್ ಒಡೆದು ಕಾರಿನಲ್ಲಿದ್ದವರ ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

      ತಮಿಳುನಾಡಿನ ಮೂಲದ ಕಾರು ಇದಾಗಿದ್ದು, ಕಾರಿನಲ್ಲಿದ್ದವರು ಸೇಲಂನಿಂದ ಮುಂಬೈಗೆ ತೆರಳುತ್ತಿದ್ದರು. 

     ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap