ಚಿಕ್ಕಬಳ್ಳಾಪುರ :
ಬೆಳ್ಳಂಬೆಳಗ್ಗೆ ಭೀಕರ ಕಾರು ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಬಳ್ಳಾಪುರ ತಾಲೂಕು ದೊಡ್ಡ ಪೈಲಗುರ್ಕಿ ಬಳಿ ಮಧ್ಯರಾತ್ರಿ 1 ಗಂಟೆಗೆ ನಡೆದಿದೆ.
ಕಾರು ಮತ್ತು ಲಾರಿ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದವು. ವೇಗವಾಗಿ ಬಂದ ಲಾರಿಯು ಹಿಂಬದಿಯಿಂದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ತಾಯಿ ಹಾಗೂ ಇಬ್ಬರು ಗಂಡು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತಂದೆಯ ಸ್ಥಿತಿ ಚಿಂತಾಜನಕವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ದುರ್ದೈವಿಗಳು ಹೈದರಾಬಾದ್ ಮೂಲದವರು ಎಂದು ಗುರುತಿಸಲಾಗಿದ್ದು, ಬೆಂಗಳೂರಿನಲ್ಲಿ ನಡೆದ ಮಾರ್ವಾಡಿ ಸಮಾರಂಭಕ್ಕೆ ಬಂದಿದ್ದರು. ಸಮಾರಂಭ ಮುಗಿಸಿ ಈ ಮಾರ್ವಾಡಿ ಕುಟುಂಬವು ಬೆಂಗಳೂರಿನಿಂದ ಹೈದರಾಬಾದ್ ಗೆ ಪ್ರಯಾಣ ಮಾಡುತ್ತಿರುವಾಗ ಈ ಅವಘಡ ಸಂಭವಿಸಿದೆ.
ಲಾರಿ ಡಿಕ್ಕಿ ಹೊಡೆತಕ್ಕೆ ಸ್ವಿಫ್ಟ್ ಕಾರು ನಜ್ಜುಗುಜ್ಜಾಗಿದ್ದು, ಗುರುತಿಸಲು ಅಸಾಧ್ಯವಾಗದಷ್ಟು ಅಪ್ಪಚ್ಚಿಯಾಗಿದೆ.
ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ