ಲಾರಿಗೆ ಕಾರು ಡಿಕ್ಕಿ : ಕಾರಿನಲ್ಲಿದ್ದ ಐವರ ದುರ್ಮರಣ!!

ಕಲಬುರಗಿ :

     ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲೂಕಿನ ಸಾವಳಗಿ ಕ್ರಾಸ್ ಬಳಿ ನಡೆದಿದೆ.

     ಕಾರಿನಲ್ಲಿದ್ದ ಸಂಜಯ್ ಕುಮಾರ್ (29), ರಾಣಿ ಸಂಜಯ್ ಚಡಚಣ (26), ಧೀರಜ್ ಸಂಗಣ್ಣ (2),ಶ್ರೇಯಸ್ ಸಂಜಯ್ ಕುಮಾರ್ ಚಣಚಣ (3) ಭಾಗ್ಯಶ್ರೀ ಭೀಮಾಶಂಕರ್ ಆಲಗಿ (22) ಮೃತ ದುರ್ದೈವಿಗಳು.

      ಎಲ್ಲರೂ ಒಟ್ಟಾಗಿ ಕಾರಿನಲ್ಲಿ ತಿರುಪತಿ ವೆಂಕಟರಮಣನ ದರ್ಶನಕ್ಕೆಂದು ತೆರಳಿದ್ದರು. ದೇವರ ದರ್ಶನ ಮುಗಿಸಿಕೊಂಡು ಮರಳಿ ಸೊಲ್ಲಾಪುರಕ್ಕೆ ತೆರಳುತ್ತಿದ್ದರು. ಸಾವಳಗಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಕಾರು ವೇಗವಾಗಿ ಹೋಗಿ ಡಿಕ್ಕಿ ಹೊಡೆದಿದೆ.

      ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

      ಕಲಬುರಗಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link
Powered by Social Snap