ಧಾರವಾಡ:
ಪ್ರೇಮಿಗಳಿಬ್ಬರು ಡೆತನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ಕಾಳಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಮಂಜುನಾಥ ಶರಿಯಪ್ಪ ದೇವಲಾಪುರ(20) ಪೂಜಾ ಸೊಪ್ಪಿನ (18) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.
ಧಾರವಾಡ ತಾಲೂಕಿನ ತಡಕೋಡ ಗ್ರಾಮದ ನಿವಾಸಿಗಳಾಗಿರುವ ಮಂಜುನಾಥ ಹಾಗೂ ಪೂಜಾ, ಆತ್ಮಹತ್ಯೆಗೂ ಮುನ್ನ ತಮ್ಮ ಸಾವಿಗೆ ತಾವೇ ಕಾರಣ ಎಂದು ಡೆತ್ ನೋಟ್ ಬರದಿಟ್ಟಿರುವುದು ಪತ್ತೆಯಾಗಿದೆ.
ಈ ಸಂಬಂಧ ಜೊಯಿಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ