
“ಎಚ್.ಡಿ.ಕುಮಾರಸ್ವಾಮಿ ಅವರು ಎರಡು ದೊಡ್ಡ ಸಂಸಾರ ನಡೆಸುತ್ತಿದ್ದಾರೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಅವರು ಎರಡು ದೊಡ್ಡ ಸಂಸಾರ ನಡೆಸುತ್ತಿದ್ದಾರೆ. ಸರ್ಕಾರ ಹಾಗೂ ಪಕ್ಷವನ್ನೂ ನಡೆಸಿಕೊಂಡು ಹೋಗುತ್ತಿದ್ದಾರೆ. ಅವರಿಗೆ ಹೆಚ್ಚಿನ ಜವಾಬ್ದಾರಿ ಇದೆ. ಅವರಿಗೆ ನಾವು ತೊಂದರೆ ಕೊಡುವುದಿಲ್ಲ ಎಂದರು.
ಕುಮಾರಸ್ವಾಮಿ ನನ್ನನ್ನು ರಾಜ್ಯ ಮಟ್ಟದಲ್ಲಿ ಬೆಳೆಸಿದ್ದಾರೆ. ಅವರೀಗ ರಾಜ್ಯದ ಮುಖ್ಯಮಂತ್ರಿ. ಹೀಗಾಗಿ ಅವರೊಂದಿಗೆ ಗುರುತಿಸಿಕೊಳ್ಳಲು ಆಗಲ್ಲ. ಆದರೆ ಪಕ್ಷಕ್ಕಾಗಿ ಯಾವುದೇ ತ್ಯಾಗ ಮಾಡಲು ನಾವು ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ.
ಇನ್ನು ದೇವೇಗೌಡ ಹಾಗೂ ಮಧು ಬಂಗಾರಪ್ಪ ನಡುವೆ ಮುನಿಸಿದೆ ಅನ್ನೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನನಗೆ ದೇವೇಗೌಡರ ಮೇಲೆ ಮುನಿಸಿಲ್ಲ. ಒಂದು ವೇಳೆ ಸಣ್ಣಪುಟ್ಟ ವಿಚಾರ ಇದ್ದರೆ ಪಕ್ಷದ ವರಿಷ್ಠರ ಜೊತೆ ಮಾತನಾಡಿಕೊಳ್ಳುತ್ತೇನೆ. ನನಗೆ ಯಾರ ಮೇಲೂ ಯಾವುದೇ ಮುನಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








