ಮಧುಗಿರಿ : ಗೆಳೆಯನ ನಾಮಪತ್ರ ಸಲ್ಲಿಸಿ ಹಿಂತಿರುಗುವಾಗ ಯುವಕನ ಸಾವು!!

ಮಧುಗಿರಿ :  

    ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಸ್ನೇಹಿತನ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗಿ ಹಿಂತಿರುಗಿ ಹೋಗುತಿದ್ದ ವ್ಯಕ್ತಿ ಶುಕ್ರವಾರ ರಾತ್ರಿ ಮೃತಪಟ್ಟ ಘಟನೆ ವರದಿಯಾಗಿದೆ.

     ಮಧುಗಿರಿ ತಾಲೂಕು ಕೊಡಿಗೇನಹಳ್ಳಿಯ ಫರೀದ್ ಮೃತಪಟ್ಟ ದುರ್ದೈವಿ. ಈತ ಬೆಂಗಳೂರಿನ ಕೆ.ಆರ್ ಪುರಂನ ಖಾಸಗಿ ಉದ್ಯೋಗಿ ಎನ್ನಲಾಗಿದೆ.

      ಫರೀದ್ ಅಪಾರ ಸ್ನೇಹಿತರೊಂದಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯಾರ್ಥಿ ಕೆ.ಎಂ. ರಾಜೇಶ್ ಅವರ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಿ ಹಿಂತಿರುಗುವಾಗ ದೊಡ್ಡಬಳ್ಳಾಪುರ ಗುಂಡಂಗೆರೆ ಕ್ರಾಸ್ ಬಳಿ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾನೆ.

      ಮೃತನ ಅಂತ್ಯಕ್ರಿಯೆ ಇಂದು ಸ್ವಗ್ರಾಮದಲ್ಲಿ ಜರುಗಲಿದ್ದು. ಹಲವಾರು ಗಣ್ಯರು ಮೃತರ ಮನೆಗೆ ತೆರಳಿ ಸಾಂತ್ವಾನ ಹೇಳಿದ್ದಾರೆ. ಮೃತರ ಸಂಬಂಧಿಕರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap