ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ 14 ಕೊರೊನಾ ವೈರಸ್ ಪ್ರಕರಣಗಳು ಕಾಣಿಸಿಕೊಂಡಿದ್ದು, ತಣ್ಣಗಿದ್ದ ಜಿಲ್ಲೆಯಲ್ಲಿ ಮತ್ತೆ ಆತಂಕ ಎದುರಾಗಿದೆ.
ಕೊಡಗು ಜಿಲ್ಲೆಯಲ್ಲಿ ಇಷ್ಟು ದಿನ ನಿಯಂತ್ರಣದಲ್ಲಿದ್ದ ಕೊರೊನಾ ಮಹಾಮಾರಿ ಬುಧವಾರ ಸ್ಫೋಟಗೊಂಡಿದೆ. ಒಂದೇ ದಿನ 14 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದರಿಂದ ಕೊಡಗಿನ 6 ಏರಿಯಾಗಳನ್ನು ನಿನ್ನೆ ರಾತ್ರಿ ಸೀಲ್ಡೌನ್ ಮಾಡಲಾಗಿದೆ.
ಮಡಿಕೇರಿ ನಗರದ ಓಂಕಾರೇಶ್ವರ ದೇವಾಸ್ಥಾನ ರಸ್ತೆ, ಪುಟಾಣಿ ನಗರ, ಡೇರಿ ಫಾರಂ, ಮಡಿಕೇರಿ ತಾಲೂಕಿನ ತಾಳತ್ ಮನೆ ಮತ್ತು ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಗ್ರಾಮದ ಏರಿಯಾ ಒಂದನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ. ಏರಿಯಾಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಪೊಲೀಸ್ ನಿಯೋಜಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/06/Kodagu.jpg)