ಜೂ.21 ರಿಂದ ಮಾಲ್, ರೆಸ್ಟೋರೆಂಟ್, ಕಲ್ಯಾಣಮಂಟಪ ಓಪನ್!!?

ಬೆಂಗಳೂರು :

     ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿದ್ದು,  ಈ ಹಿನ್ನೆಲೆಯಲ್ಲಿ ಕೆಲ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಬಹುದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ.

    ಈ ಕುರಿತಂತೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದು, ಸಭೆಯಲ್ಲಿ ಅನ್’ಲಾಕ್ 2 ಹಂತದಲ್ಲಿ  ಮಾಲ್, ರೆಸ್ಟೋರೆಂಟ್, ಮದುವೆ ಮಂಟಪಗಳು, ಶಾಪಿಂಗ್ ಕಾಂಪ್ಲೆಕ್ಸ್ ಸೇರಿದಂತೆ ಕೆಲವೊಂದು ಆರ್ಥಿಕ ಚಟುವಟಿಕೆಗಳನ್ನು ಜೂ.21ರಿಂದ ಪುನರಾರಂಭಿಸಬಹುದು. ನಿಯಂತ್ರಿತ ಸಂಖ್ಯೆಯ ಜನರು ಸೇರುವಂತೆ ನೋಡಿಕೊಳ್ಳಬೇಕು.

     ಅಲ್ಲದೆ, ಅನ್ಲಾಕ್ 2.0 ಮತ್ತು 3.0 ರ ನಡುವೆ ಎರಡು ವಾರಗಳ ಅಂತರ ಇರುವಂತೆಯೂ ಸೂಚಿಸಿದೆ. ಈ ಪ್ರದೇಶಗಳಲ್ಲಿ ಹೆಚ್ಚೆಚ್ಚು ಜನರು ಸೇರುವುದರಿಂದ ಸೋಂಕು ಹೆಚ್ಚಾಗಿ ಹರಡಲಿದ್ದು, ಎರಡರ ನಡುವೆ 2 ವಾರಗಳ ಅಂತರ ಇರಬೇಕೆಂದು ಸರ್ಕಾರಕ್ಕೆ ತಿಳಿಸಿದೆ. ಅನ್ಲಾಕ್ 3.0 ಗೂ ಮೊದಲೂ ಆಕ್ಸಿಜನ್ ಹಾಸಿಗೆಗಳು ಶೇ.60ಕ್ಕಿಂತಲೂ ಕಡಿಮೆ ಇರುವ ಜಿಲ್ಲೆಗಳನ್ನು ಪರಿಶೀಲನೆ ನಡೆಸಬೇಕೆಂದು ತಿಳಿಸಿದೆ.

     ಜೂನ್ ಅಂತ್ಯದವರೆಗೂ ನೈಟ್ ಕರ್ಫ್ಯೂ ಮುಂದುವರೆಸಬೇಕು. ಸಾರ್ವಜನಿಕ ರ್ಯಾಲಿ, ಧರಣಿ, ಜಾತ್ರೆ ಹಾಗೂ ಹಬ್ಬಗಳ ಮೇಲೆ ನಿರ್ಬಂಧ ಹೇರಬೇಕು. ಜೂನ್ 21ರಿಂದ 2ನೇ ಹಂತದ ಅನ್’ಲಾಕ್ ಆರಂಭವಾಗಲಿದ್ದು,  ಪರಿಸ್ಥಿತಿಗೆ ಅನುಸರಿಸಿ ಜನರ ಓಡಾಟಕ್ಕೆ ಅವಕಾಶ ನೀಡಬೇಕು. ಅನ್’ಲಾಕ್ 3ನೇ ಹಂತದಲ್ಲಿ ಜಿಮ್, ಯೋಗಾ ಕೇಂದ್ರ, ಧಾರ್ಮಿಕ ಕೇಂದ್ರಗಳು, ಚಿತ್ರಮಂದಿರಗಳು, ಸ್ಫೋರ್ಟ್ಸ್ ಕ್ಲಬ್, ಕ್ಲಬ್ ಹೌಸ್, ಸಾರ್ವಜನಿಕ ಶೌಚಾಲಯ ಆರಂಭಿಸಬೇಕು. ನೈಟ್ ಕರ್ಫ್ಯೂ, ಶಾಲಾ ಕಾಲೇಜುಗಳು ಪುನರಾರಂಭ ಕುರಿತು ಪ್ರತ್ಯೇಕವಾಗಿ ನಿರ್ಧಾರ ಕೈಗೊಳ್ಳುವಂತೆ ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap