ಉಡುಪಿ:
ಮಣಿಪಾಲದ ಮಾಂಡವಿ ಎಮೆರಾಲ್ಡ್ ಕಟ್ಟಡದ ಬಳಿ ನಾಯಿಗಳ ಮಾರಣ ಹೋಮ ನಡೆದ ಘಟನೆ ಬೆಳಕಿಗೆ ಬಂದಿದೆ. ಸುಮಾರು ಹತ್ತಕ್ಕೂ ಅಧಿಕ ನಾಯಿಗಳಿಗೆ ವಿಷ ಉಣಿಸಿ ಹತ್ಯೆ ಮಾಡಲಾಗಿದೆ.
ಉಡುಪಿ ನಗರದಲ್ಲಿ ಬೀದಿನಾಯಿಗಳ ಕಾಟ ಹೆಚ್ಚಾಗಿದೆ. ಇತ್ತೀಚೆಗೆ ಬೀದಿ ನಾಯಿಗಳಿಂದ ಸಾಕಷ್ಟು ಜನ ಕಚ್ಚಿಸಿಕೊಂಡು ಆಸ್ಪತ್ರೆಗೆ ಸೇರಿದ್ದೂ ಇದೆ. ಆದ್ದರಿಂದ ಬೀದಿ ನಾಯಿಗಳ ಕಾಟದಿಂದ ಮುಕ್ತಿ ಪಡೆಯಲೆಂದೇ ಬೀದಿ ನಾಯಿಗಳಿಗೆ ಮೀನಿನಲ್ಲಿ ವಿಷ ಬೆರೆಸಿ ಹಾಕಿ ನಾಯಿಗಳ ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಕೀಡಿಗೇಡಿಗಳ ಈ ಕೃತ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಮಲ್ಪೆ ಮಧ್ವರಾಜ್ ಅನಿಮಲ್ ಕೇರ್ ಟ್ರಸ್ಟ್‌ನ ಸಂಸ್ಥಾಪಕಿ ಬಬಿತಾ ಮಧ್ವರಾಜ್ ಮಂಗಳವಾರ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿ ಸಿಸಿ ಟಿವಿ ದೃಶ್ಯಾವಳಿ ಸಹಿತ ಇತರೆ ದಾಖಲೆಗಳನ್ನು ಪರಿಶೀಲಿಸಿ ಆರೋಪಿ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ಆರೋಪಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಸದ್ಯ ಈ 10 ಬೀದಿ ನಾಯಿಗಳ ಸಾವಿಗೆ ಕಾರಣ ಏನು ಎನ್ನುವ ನಿಟ್ಟಿನಲ್ಲಿ ಮಣಿಪಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ