ನಮ್ಮ ಮೆಟ್ರೋ ನಿಲ್ದಾಣದಿಂದಲೇ ಜಿಗಿದ ಯುವಕ!

ಬೆಂಗಳೂರು:

      ನಮ್ಮ ಮೆಟ್ರೋ ನಿಲ್ದಾಣದಿಂದ ಜಿಗಿದು ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.  

      ಸಂದೀಪ್ (27) ನಗರದ ದಾಸರಹಳ್ಳಿ ಮೆಟ್ರೊ ನಿಲ್ದಾಣದ ಕಾನ್‌ಕೋರ್ಸ್‌ ಹಂತದಿಂದ ಜಿಗಿದು ಗಾಯಗೊಂಡಿರುವ ಯುವಕ. ಸಂದೀಪ್‌ ಮೂಲತಃ ಕೇರಳ ರಾಜ್ಯದವನಾಗಿದ್ದು, ಪಿಯುಸಿ ವ್ಯಾಸಂಗ ಮಾಡಿದ್ದು, ಅರ್ಧಕ್ಕೆ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದ. ಯುವಕನ ಪೋಷಕರು ಹಲವು ವರ್ಷಗಳಿಂದ ದಾಸರಹಳ್ಳಿಯಲ್ಲಿ ನೆಲೆಸಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ.

      ಸಂದೀಪ್‌ ಒಂದು ತಿಂಗಳ ಹಿಂದೆ ನಗರಕ್ಕೆ ಬಂದಿದ್ದು, ಇಲ್ಲಿಯೇ ಓಡಾಡಿಕೊಂಡಿದ್ದ. ಸಂದೀಪ್‌ ಮಂಗಳವಾರ ಮಧ್ಯಾಹ್ನ 3.30ರ ಸುಮಾರಿಗೆ ‘ಪಾನಮತ್ತರಾಗಿ ಯಶವಂತಪುರ ಮೆಟ್ರೋ ರೈಲ್ವೆ ನಿಲ್ದಾಣದಿಂದ ದಾಸರಹಳ್ಳಿ ನಿಲ್ದಾಣಕ್ಕೆ ಬಂದಿದ್ದ. ಮೆಟ್ರೋ ಇಳಿದು ಸಂದೀಪ್‌ ನಿಲ್ದಾಣದಲ್ಲಿನ ಶೌಚಾಲಯಕ್ಕೆ ತೆರಳಿದ್ದ. ಅಲ್ಲಿದ್ದ ಪ್ರಯಾಣಿಕರ ಜೊತೆ ಸುಖಾಸುಮ್ಮನೇ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ.  ಕೂಗಾಟ ಕೇಳಿ ಸ್ಥಳಕ್ಕೆ ಹೋಗಿದ್ದ ಭದ್ರತಾ ಸಿಬ್ಬಂದಿ, ಸಂದೀಪ್‌ ಅವರನ್ನು ಹಿಡಿದುಕೊಳ್ಳಲು ಮುಂದಾಗಿದ್ದರು. ತಪ್ಪಿಸಿಕೊಂಡು ಓಡಲಾರಂಭಿಸಿದ್ದ ಅವರು ಕಾನ್‌ಕೋರ್ಸ್‌ ಹಂತದಿಂದ ಜಿಗಿದಿದ್ದರು’ ಎಂದು ಬಾಗಲಗುಂಟೆ ಪೊಲೀಸರು ವಿವರಿಸಿದರು.

      ‘ಘಟನೆಯಿಂದ ಸಂದೀಪ್ ಅವರ ಕೈ ಹಾಗೂ ಕಾಲಿಗೆ ಪೆಟ್ಟಾಗಿತ್ತು. ಪಾನಮತ್ತರಾಗಿದ್ದ ಅವರಿಗೆ ಅದರ ಅರಿವೇ ಇರಲಿಲ್ಲ. ಗಾಯಗೊಂಡಿದ್ದ ಯುವಕನನ್ನು ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಿದ್ದರು. ಯುವಕನ ಕೈ-ಕಾಲು, ದೇಹದ ಹಲವು ಭಾಗದಲ್ಲಿ ಗಂಭೀರ ಪೆಟ್ಟು ಬಿದ್ದಿದ್ದು, ಅರೆ ಪ್ರಜ್ಞಾಸ್ಥಿತಿಯಲ್ಲಿದ್ದಾನೆ. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಈ ಸಂಬಂಧ ಬಾಗಲಗುಂಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap