ಮಂಡ್ಯ ಬಸ್ ದುರಂತ : ಚಾಲಕ ಬಿಚ್ಚಿಟ್ಟ ಸತ್ಯ!!

ಮಂಡ್ಯ :

      ಕನಗನಮರಡಿ ಬಳಿ ಬಸ್ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನಕ್ಕೆ ಒಳಗಾಗಿರುವ ಆರೋಪಿ ಚಾಲಕ ಶಿವಣ್ಣ ಪೊಲೀಸರ ತನಿಖೆ ವೇಳೆ ಅಪಘಾತಕ್ಕೆ ಕಾರಣವನ್ನು ತಿಳಿಸಿದ್ದಾನೆ.

ಅಪಘಾತಕ್ಕೆ ಕಾರಣ:

      ಕನಗನಮರಡಿ ನಾಲೆಯ ಬಳಿ ಬರುತ್ತಿದ್ದಾಗ ಬಸ್ ನನ್ನ ನಿಯಂತ್ರಣ ತಪ್ಪಿತು. ಆಗ ಬಸ್ ನಾಲೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯುತ್ತಿತ್ತು. ನಾನು ಅದನ್ನು ತಪ್ಪಿಸಲು ಪ್ರಯತ್ನಿಸಿದೆ. ಆದರೆ ದುರದೃಷ್ಟಾವಶಾತ್ ಬಸ್ ನಾಲೆಗೆ ಉರುಳಿಬಿತ್ತು ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ.

ಚಾಲಕ ಬದುಕುಳಿದ ಕಥೆ:

     ನನಗೂ ಈಜು ಬರುತ್ತಿರಲಿಲ್ಲ. ಸ್ಥಳೀಯರಾದ ಅಂಕೇಗೌಡ ಎಂಬವವರು ನನ್ನನ್ನು ರಕ್ಷಿಸಿದ್ದರು. ಸುಸ್ತಾಗಿದ್ದ ನನ್ನನ್ನು ಜಮೀನಿನ ಬಳಿ ಕೂರಿಸಿದ್ದರು. ಈ ವೇಳೆ ನಡೆದುಕೊಂಡೇ ಬಸರಾಳು ಗ್ರಾಮಕ್ಕೆ ಹೋಗಿ ಅಲ್ಲಿಂದ ಬೆಂಗಳೂರಿಗೆ ಹೋಗಿ ತಲೆಮರೆಸಿಕೊಂಡಿದ್ದಾಗಿ ಬಸ್ ಅಪಘಾತದಿಂದ ತಾನು ಪಾರಾದ ಬಗೆಯನ್ನು ವಿವರಿಸಿದ್ದಾನೆ.

ಮಂಡ್ಯ ಬಸ್ ದುರಂತ : ನಾಪತ್ತೆಯಾಗಿದ್ದ ಚಾಲಕ ಅಂದರ್!

ನಾಲೆಗೆ ತಡೆಗೋಡೆ ನಿರ್ಮಾಣ:

      30 ಜನರನ್ನು ಬಲಿ ಪಡೆದ ಕನಗನಮರಡಿ ಬಸ್ ದುರಂತದ ನಂತರ ಸರ್ಕಾರ ಎಚ್ಚೆತ್ತುಕೊಂಡಿದ್ದು, ನಾಲೆಗೆ ತಡೆಗೋಡೆಯನ್ನು ನಿರ್ಮಿಸಿದೆ. ನಾಲೆಯ ಎಡಭಾಗದಲ್ಲಿ ರಸ್ತೆಗೆ ಹೊಂದಿಕೊಂಡಂತೆ ಸರ್ಕಾರ ತಡೆಗೋಡೆ ನಿರ್ಮಾಣ ಮಾಡಿದೆ. ಅಷ್ಟೇ ಅಲ್ಲದೇ ದುರಂತದಿಂದ ಎಚ್ಚೆತ್ತುಕೊಂಡ ಸರ್ಕಾರ ಅಪಘಾತ ನಡೆದ ಮಾರನೇ ದಿನದಿಂದಲೇ ಈ ಭಾಗದಲ್ಲಿ ಸರ್ಕಾರಿ ಬಸ್ ಸಂಚಾರವನ್ನು ಆರಂಭಿಸಿದೆ. ಸದ್ಯ ಗ್ರಾಮದ ಮಾರ್ಗವಾಗಿ ದಿನಕ್ಕೆ ನಾಲ್ಕು ಬಾರಿ ಸರ್ಕಾರಿ ಬಸ್ ಸಂಚಾರ ನಡೆಸುತ್ತಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link