ಮಂಡ್ಯ:
ಮಂಡ್ಯ ಜೆಡಿಎಸ್ ಪಕ್ಷದಲ್ಲಿ ಯಾರು ಕ್ಯಾಂಡಿಡೇಟ್ ಆಗುತ್ತಾರೆ ಎಂದು ಗೊತ್ತಿಲ್ಲ. ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸುತ್ತೇವೆ’ ಎಂದು ಸಿದ್ದರಾಮಯ್ಯ ತಿಳಿಸಿದರು.
ನಗರದಲ್ಲಿ ಮಾತನಾಡಿದ ಅವರು, ಮಂಡ್ಯ ಚುನಾವಣೆಯ ಸೀಟು ಹಂಚಿಕೆ ವಿಚಾರವಾಗಿ ಮಾತನಾಡಿ, ಮಂಡ್ಯ ಜೆಡಿಎಸ್ ಪಾಲಾಗುತ್ತದೆ. ಆದರೆ ಅವರ ಅಭ್ಯರ್ಥಿ ಯಾರು ಎಂದು ತಿಳಿದಿಲ್ಲ. ಇಲ್ಲಿ ವಿಶ್ವಾಸದ ಪ್ರಶ್ನೆ ಬರುವುದಿಲ್ಲ. ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸುತ್ತೇವೆ ಎಂದು ಹೇಳಿದರು.
ಇನ್ನು ಕಾಂಗ್ರೆಸ್ನ ಸೀಟು ಹಂಚಿಕೆಯ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇವತ್ತೇ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದೆ. ನಮ್ಮ ಸೀಟು ಹಂಚಿಕೆಯೂ ಆಗುತ್ತದೆ. ಬಿಜೆಪಿಯರದ್ದು ಸೀಟು ಹಂಚಿಕೆ ಆಗಿದೆಯಾ ಎಂದು ಪ್ರಶ್ನಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ