ವಿದ್ಯಾರ್ಥಿನಿ ಗ್ಯಾಂಗ್‌ರೇಪ್‌ ಪ್ರಕರಣ : ಎಲ್ಲಾ 5 ಆರೋಪಿಗಳ ಅರೆಸ್ಟ್!!

ಮಂಗಳೂರು:

      ಕಾಲೇಜು ವಿದ್ಯಾರ್ಥಿಗಳಿಂದ ಸಹಪಾಠಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳೆಲ್ಲರನ್ನು ಪುತ್ತೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ.

      ಆರೋಪಿಗಳನ್ನು ಗುರುನಂದನ್, ಪ್ರಜ್ವಲ್, ಕಿಶನ್, ಸುನೀಲ್ ಹಾಗೂ ಪ್ರಖ್ಯಾತ್ ಎಂದು ಗುರುತಿಸಲಾಗಿದ್ದು, ಬಂಧಿತರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ವಿದ್ಯಾರ್ಥಿನಿಗೆ ಗಾಂಜಾ ನೀಡಿ ಸಹಪಾಠಿಗಳಿಂದ ಗ್ಯಾಂಗ್‌ರೇಪ್‌!!?

      ಪ್ರಕರಣ ಕುರಿತು ಬುಧವಾರ ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಕಾಲೇಜು ಬಿಟ್ಟ ಬಳಿಕ‌ ಆರೋಪಿ ವಿದ್ಯಾರ್ಥಿಗಳು ಸಂಚು ರೂಪಿಸಿದ್ದಾರೆ. ವಿದ್ಯಾರ್ಥಿನಿಯನ್ನು ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಪರಿಚಯದ ವಿದ್ಯಾರ್ಥಿಗಳು ಆಗಿದ್ದರಿಂದ ಏನನ್ನು ಪ್ರಶ್ನಿಸದೇ ಸಂತ್ರಸ್ತೆ ವಿದ್ಯಾರ್ಥಿನಿ ಅವರೊಂದಿಗೆ ಹೋಗಿದ್ದಾಳೆ. ಬಳಿಕ ಕಾರಿನಲ್ಲಿ ಕಾಡಿಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ವಿದ್ಯಾರ್ಥಿನಿಯು ದಲಿತ ಸಮುದಾಯಕ್ಕೆ ಸೇರಿದವಳಾಗಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ.

      ನಾಲ್ಕು ತಿಂಗಳ ಹಿಂದೆಯೇ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬರಲು ವೈರಲ್​ ಆದ ವಿಡಿಯೋ ಕಾರಣವಾಗಿದೆ. ನಾಲ್ವರು ಆರೋಪಿ ವಿದ್ಯಾರ್ಥಿಗಳ ನಡುವೆ ಕಾಲೇಜಿನ ಚುನಾವಣೆ ವಿಚಾರದಲ್ಲಿ ಮನಸ್ತಾಪ ಉಂಟಾದ ಕಾರಣದಿಂದಾಗಿ, ದ್ವೇಷದಿಂದ ವಿಡಿಯೋವನ್ನು ವೈರಲ್​ ಮಾಡಿದ್ದಾರೆ. ಅನಾಮಧೇಯ ವ್ಯಕ್ತಿಯ ಹೆಸರಿನಲ್ಲಿ ವಿಡಿಯೋ ಹರಿಬಿಟ್ಟು ಪ್ರಕರಣವನ್ನು ಆರೋಪಿ ವಿದ್ಯಾರ್ಥಿಗಳೇ ಬಿಚ್ಚಿಟ್ಟಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap