ಮಂಗಳೂರು ಬಾಂಬ್ : ಪೊಲೀಸರ ಮುಂದೆ ಶರಣಾದ ಆರೋಪಿ!!

ಮಂಗಳೂರು : 

      ಮಂಗಳೂರಿನ ಬಜ್ಪೇ ವಿಮಾನ ನಿಲ್ದಾಣದಲ್ಲಿ ಕಚ್ಚಾ ಬಾಂಬ್ ಇಟ್ಟು ಆತಂಕ ಸೃಷ್ಟಿಸಿದ್ದ ಬಾಂಬರ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ.

      ಉಡುಪಿಯ ಮಣಿಪಾಲ ನಿವಾಸಿ ಆದಿತ್ಯ ರಾವ್ (40) ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಈ ವೇಳೆ ಪೊಲೀಸರು ತನಿಖೆ ನಡೆಸಿದ್ದು, ಈ ವೇಳೆ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಐಜಿಪಿ ನೀಲಮಣಿರಾಜು ಅವರ ಎದುರು ಬುಧವಾರ ಬೆಳಿಗ್ಗೆ ಸುಮಾರು 8.40ರ ಸುಮಾರಿಗೆ ಆರೋಪಿ ಆದಿತ್ಯ ರಾವ್ ನಾನೇ ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟಿದ್ದು ನಾನೇ ಎಂದು ಒಪ್ಪಿಕೊಂಡಿದ್ದಾನೆ.

      ಸದ್ಯ ಪೊಲೀಸರು ಮೆಡಿಕಲ್ ಟೆಸ್ಟ್ ಗಾಗಿ ಆರೋಪಿ ಆದಿತ್ಯರಾವ್ ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ