ಬೆಂಗಳೂರು :
ಸಿಎಎ ವಿರೋಧಿಸಿ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಕಾರಣವಾಗಿದ್ದ ಎನ್ನಲಾದ 22 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆದು ಮಂಗಳೂರಿನಲ್ಲಿ ಗೋಲಿಬಾರ್ ಆಗಿತ್ತು. ಗೋಲಿಬಾರ್ ನಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಹಿಂಸಾಚಾರಕ್ಕೆ ಕಾರಣವಾಗಿದ್ದ ಎನ್ನಲಾದ 22 ಆರೋಪಿಗಳನ್ನು ಬಂಧಿಸಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಸಾಕ್ಷ್ಯ ಎಂದು ಪರಿಗಣಿಸಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅರೋಪಿಗಳು ನೇರವಾಗಿ ಭಾಗಿಯಾಗಿದ್ದಾರೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲ ಎಂದು ಏಕಸದಸ್ಯ ಪೀಠ ಅಭಿಪ್ರಾಯಪಟ್ಟು 22 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಪೊಲೀಸರು ಆರೋಪಿಗಳ ಬಂಧನ ಮಾಡುವಾಗ ಪೊಲೀಸರು ಸರಿಯಾದ ಕ್ರಮವನ್ನು ಕೈಗೊಂಡಿಲ್ಲ. ಆರೋಪಿಗಳು ಗಲಭೆಯಲ್ಲಿ ಭಾಗಿಯಾಗಿರೋದಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಒದಗಿಸಿಲ್ಲದೆ ಇರೋ ಅಂಶಗಳನ್ನು ಪರಿಗಣಿಸಿ ನ್ಯಾಯಲಯ ಎಲ್ಲಾ 22 ಆರೋಪಿಗಳಿಗೆ ಜಾಮೀನನ್ನು ಮಂಜೂರು ಮಾಡಿದೆ.
ಪೊಲೀಸರ ಮೇಲೆ ಎಫ್.ಐ.ಆರ್ :
ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಂಗಳೂರು ಪೊಲೀಸರಿಗೆ ದೊಡ್ಡ ಶಾಕ್ ನೀಡಿದ್ದು, ಗಲಭೆ ನೆಪದಲ್ಲಿ ಪೊಲೀಸರು ಅಮಾಯಕರ ಮೇಲೆ ಹಲ್ಲೆ ಮಾಡಿದ್ದಾರೆ. ದೈಹಿಕ ಮತ್ತು ಮಾನಸಿಕವಾಗಿ ಹಿಂಸೆ ಕೊಟ್ಟಿದ್ದಾರೆ. ಈ ಹಿಂಸೆ ಅನುಭವಿಸಿದವರು ಪೊಲೀಸರ ವಿರುದ್ಧ ದೂರು ನೀಡಿದರೂ ಎಫ್‍ಐಆರ್ ದಾಖಲು ಮಾಡುತ್ತಾ ಇಲ್ಲ ಅಂತ ಹೈಕೋರ್ಟ್ ಮೊರೆ ಹೋಗಿದ್ದರು. ಇದನ್ನು ಪರಿಶೀಲಿಸಿದ ನ್ಯಾಯಾಲಯ ಪೊಲೀಸರ ವಿರುದ್ಧ ಎಫ್‍ಐಆರ್ ದಾಖಲು ಮಾಡೋದಕ್ಕೆ ಸೂಚನೆ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
