ಚಿತ್ರದುರ್ಗ :
ಮಹಿಳೆ ಕೈಗೆ ಚಾಕು ಇರಿದು ಮಾಂಗಲ್ಯ ಸರ ದರೋಡೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ಕರೀಕೆರೆ ಗ್ರಾಮದ ಬಳಿ ನಡೆದಿದೆ.
ಗ್ರಾಮದ ವರಲಕ್ಷ್ಮೀ ಎಂಬುವವರು ಪತಿ ಶಿವಣ್ಣ ಜೊತೆ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು 1.40 ಲಕ್ಷ ಮೌಲ್ಯದ 45 ಗ್ರಾಂ ಚಿನ್ನದ ಸರ ಕದ್ದು ಪರಾರಿಯಾಗಿದ್ದಾರೆ.
ಸದ್ಯ ಗಾಯಾಳು ವರಲಕ್ಷ್ಮೀ ಅವರನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಘಟನೆ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/10/Umen-Mangalya-chain.jpg)