ಬೆಂಗಳೂರು:
ಐಎಂಎ ವಂಚಕ ಮನ್ಸೂರ್ ಖಾನ್ ನನ್ನು 14 ದಿನಗಳ ನ್ಯಾಯಾಂಗ ಬಂಧನದಲ್ಲಿರಿಸುವಂತೆ ನ್ಯಾಯಾಲಯ ಆದೇಶ ನೀಡಿದ್ದು, ಆತನನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗುತ್ತಿದೆ.

ಇಡಿ ಅಧಿಕಾರಿಗಳ ಮುಂದೆ ವಿಚಾರಣೆ ವೇಳೆ ಕೆಲ ಕುತೂಹಲಕಾರಿ ಹೇಳಿಕೆಗಳನ್ನು ನೀಡಿರುವ ಮನ್ಸೂರ್ ಖಾನ್, ಶಾರ್ಪ್ ಶೂಟರ್ಗಳಿಗೆ ನನ್ನನ್ನು ಕೊಲ್ಲಲು ಸುಫಾರಿ ನೀಡಲಾಗಿದೆ. ನನ್ನ ಮೇಲೆ ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಹೇಳಿದ್ದಾನೆ. ಜೀವ ಬೆದರಿಕೆ ಹಿನ್ನೆಲೆಯಲ್ಲಿ ಐಎಂಎ ಸಮೂಹ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮುಹಮ್ಮದ್ ಮನ್ಸೂರ್ ಖಾನ್ ಭದ್ರತೆಗೆ ಕೇಂದ್ರೀಯ ಮೀಸಲು ಪಡೆಯ ಯೋಧರನ್ನು ನಿಯೋಜಿಸಲಾಗಿದೆ.
ಎಸ್‍ಐಟಿ ಪರ ವಕೀಲರು, ನ್ಯಾಯಾಂಗ ಬಂಧನಕ್ಕೆ ಕೊಟ್ಟರೂ ಯಾರೂ ಭೇಟಿಯಾಗದಂತೆ ಆದೇಶ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು. ನ್ಯಾಯಾಂಗ ಬಂಧನದಲ್ಲಿ ವಕೀಲರು ಹೊರತುಪಡಿಸಿ ಕುಟುಂಬಸ್ಥರು ಸೇರಿದಂತೆ ಬೇರೆ ಯಾರು ಭೇಟಿಯಾಗುವಂತಿಲ್ಲ ಎಂದು ನ್ಯಾಯಾಲಯ ಸೂಚಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
